ರಿಲೀಸ್ ಆದ ಕೆಲವೇ ಕ್ಷಣದಲ್ಲಿ ಕರವೇ ನಾರಾಯಣ ಮತ್ತೆ ಖಾಕಿ ವಶಕ್ಕೆ !?

ಬೆಂಗಳೂರು:- ಇಂಗ್ಲಿಷ್ ನಾಮಫಲಕ ವಿರೋಧಿಸಿ ಜೈಲು ಸೇರಿ ಇದೀಗ ಬಿಡುಗಡೆಯಾಗುತ್ತಿದ್ದಂತೆ ಕರವೇ ನಾರಾಯಣಗೌಡ ಮತ್ತೆ ಪೊಲೀಸರ ವಶಕ್ಕೆ ಪಡೆಯಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಅವರಿಗೆ ಜಾಮೀನು‌ ಮಂಜೂರು ಆದ ಹಿನ್ನೆಲೆಯಲ್ಲಿ ಮಂಗಳವಾರ ಬಿಡುಗಡೆಯಾಗಿದ್ದಾರೆ.

ನಾರಯಣಗೌಡ ಅವರು ಬಿಡುಗಡೆಯಾಗುತ್ತಿದ್ದಂತೆ ಕುಮಾರಸ್ವಾಮಿ ಲೇಔಟ್ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ಇದೀಗ ಮಾರ್ಥಾಸ್ ಆಸ್ಪತ್ರೆಯಲ್ಲಿ ನಾರಾಯಣಗೌಡ ಅವರನ್ನು ಆರೋಗ್ಯ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಬಳಿಕ ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ಕೋರ್ಟ್​ಗೆ ಹಾಜರು ಪಡಿಸಲಿದ್ದಾರೆ. 2017ರ ಹಳೇ ಕೇಸ್ ಸಂಬಂಧ ಪೊಲೀಸರು ನಾರಾಯಣಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

Loading

Leave a Reply

Your email address will not be published. Required fields are marked *