ಬೆಂಗಳೂರು: ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಬೆಂಗಳೂರಿನ ಬಿಜಿಎಸ್ ಗ್ರೌಂಡಿನಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದಂತಹ ಕಾರ್ಗಿಲ್ ಯೋಧರನ್ನು ನೆನೆದು ಕಾರ್ಗಿಲ್ ದಿವಸದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಇನ್ನೂ ಈ ಕಾರ್ಯಕ್ರಮದಲ್ಲಿ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದಂತಹ ಶ್ರೀ ಪ್ರಿಯಕೃಷ್ಣರವರು ಭಾಗಿಯಾದರು.
ಬಳಿಕ ಮಾತನಾಡಿದ ಶಾಸಕ ಪ್ರಿಯಕೃಷ್ಣ ಅವರು, “ಕಾರ್ಗಿಲ್ ಯುದ್ಧದಲ್ಲಿ ಸುಮಾರು 524 ಯೋಧರು ದುರ್ಗಮ ಸ್ಥಳದಲ್ಲಿ ಹೋರಾಡಿ ದೇಶವನ್ನು ರಕ್ಷಣೆ ಮಾಡುವ ಕೆಲಸ ಮಾಡಿದ್ದಾರೆ. ತ್ಯಾಗ, ಬಲಿದಾನ ಮಾಡಿದ ಎಲ್ಲರ ಆತ್ಮಕ್ಕೆ ಶಾಂತಿ ಕೋರಿ ಸ್ಮರಿಸುವುದು ನಮ್ಮ ಕರ್ತವ್ಯ. ಅವರ ಜೀವನ ಇಂದಿನ ಯುವಕರಿಗೆ ಸ್ಫೂರ್ತಿ ಹಾಗೂ ಮಾರ್ಗದರ್ಶನ ನೀಡುವಂತಹದ್ದು” ಎಂದರು.