ಕಾರ್ಲ್ ಮಾರ್ಕ್ಸ್ ಪಠ್ಯ ಓದಬಹುದು, RSS​ ನಾಯಕರದ್ದು ಯಾಕೆ ಓದಬಾರದು?: ಸಿಟಿ ರವಿ ಪ್ರಶ್ನೆ

ದೆಹಲಿ: ಕಾರ್ಲ್ ಮಾರ್ಕ್ಸ್ ಪಠ್ಯ ಓದಬಹುದು, ಆರ್​ಎಸ್​ಎಸ್​ ನಾಯಕರದ್ದು ಯಾಕೆ ಓದಬಾರದು? ಎಂದು ಬಿಜೆಪಿ ನಾಯಕ ಸಿಟಿ ರವಿ ಪ್ರಶ್ನಿಸಿದ್ದಾರೆ. ಇವರ ನೆರವು ಇಲ್ಲದೆ ಸಂಘದ ಶಾಖೆಯ ಮೂಲಕವೇ ವಿಚಾರ ಬೆಳೆಯಲಿದೆ. ಪಠ್ಯದಿಂದ ಹೊರಹಾಕಬಹುದು, ಹೃದಯದಿಂದ ಹೊರಹಾಕಲು ಸಾಧ್ಯವಿಲ್ಲ.

ಆರ್​ಎಸ್​ಎಸ್​ ವಿಚಾರದಲ್ಲಿ ನೆಹರು, ಇಂದಿರಾ ಸೋತಿದ್ದಾರೆ. ಸುಳ್ಳು ಮತ್ತು ಕಾಂಗ್ರೆಸ್ ನಾಣ್ಯದ ಎರಡು ಮುಖಗಳು. ಕಾಂಗ್ರೆಸ್ ನಾಯಕರು ಕುರ್ಚಿಗೆ ಅಂಗಲಾಚಿದ್ದರು. ಕಾಂಗ್ರೆಸ್ ನವರನ್ನು ಯಾಕೆ‌ ಅಂಡಮಾನ್ ಜೈಲಿಗೆ ಹಾಕಲಿಲ್ಲ ಎಂದು ಪ್ರಶ್ನಿಸಿದರು.

ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಂಡಿತು. ಹೊಂದಾಣಿ ರಾಜಕಾರಣದಿಂದ ಬಿಜೆಪಿ ಸೋತಿದೆ. ಈ ನಡೆ ಅನುಸರಿಸದಿದ್ದಿದ್ದರೆ ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ತಮ್ಮ ಪಕ್ಷದ ನಾಯಕರ ವಿರುದ್ಧವೇ ಸಿ.ಟಿ‌ ರವಿ ಬಹಿರಂಗವಾಗಿ ಅಸಮಧಾನ ಹೊರಹಾಕಿದ್ದಾರೆ.

Loading

Leave a Reply

Your email address will not be published. Required fields are marked *