ಬಿಬಿಎಂಪಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಅದ್ದೂರಿ ಆಚರಣೆ – ಫೋಟೋಸ್ ಗಳು ಇಲ್ಲಿವೆ

ಬೆಂಗಳೂರು;- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ”ದ ಅಂಗವಾಗಿ ಕೇಂದ್ರ ಕಛೇರಿ ಆವರಣದ ಮುಂಭಾಗದಲ್ಲಿ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಧ್ವಜಾರೋಹಣ ನೆರವೇರಿಸಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿದರು.

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಪಾಲಿಕೆ ವತಿಯಿಂದ ವಿಶೇಷ ರೀತಿಯಲ್ಲಿ ಆಚರಿಸಲಾಯಿತು.

> ಬಿಬಿಎಂಪಿ ವ್ಯಾಪ್ತಿಯಲ್ಲಿ ಧ್ವಜಾರೋಹಣ ರಾಷ್ಟ್ರಗೀತೆ, ನಾಡಗೀತೆ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯಾದ ನಂತರ ಕ್ರಮವಾಗಿ 05 ಕನ್ನಡ ಗೀತೆಗಳನ್ನು ಹಾಡುವ ಮೂಲಕ ನುಡಿ ನಮನ ಸಲ್ಲಿಸಲಾಯಿತು.

(ಅ) ಉದಯವಾಗಲಿ ನಮ್ಮ ಚಲುವ ಕನ್ನಡ ನಾಡು – ಹುಯಿಲಗೊಳ ನಾರಾಯಣರಾಯರು.
(ಆ) ಎಲ್ಲಾದರು ಇರು ಎಂತಾದರು ಇರು – ಕುವೆಂಪು.
(ಇ) ಒಂದೇ ಒಂದೇ ಕರ್ನಾಟಕ ಒಂದೇ – ದ.ರಾ.ಬೇಂದ್ರೆ.
(ಈ) ಹೊತ್ತಿತೋ ಹೊತ್ತಿತೋ ಕನ್ನಡದ ದೀಪ – ಸಿದ್ದಯ್ಯ ಪುರಾಣಿಕ.
(ಉ) ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ – ಚನ್ನವೀರಕಣವಿ.

> ಪಾಲಿಕೆ‌ ಕೇಂದ್ರ ಕಛೇರಿಯ ಮುಂಭಾಗದಲ್ಲಿ ಮುಂದೆ ಕೆಂಪು ಮತ್ತು ಹಳದಿ ಬಣ್ಣದಲ್ಲಿ ಕರ್ನಾಟಕದ ನಕ್ಷೆಯ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಘೋಷ ವಾಕ್ಯವನ್ನು ಬರೆಯಲಾಯಿತು.

> ಪಾಲಿಕೆ ಕೇಂದ್ರ ಕಛೇರಿ ಮುಂಭಾಗ ಕೆಂಪು ಮತ್ತು ಹಳದಿ ಬಣ್ಣದ ದೊಡ್ಡ ಬಲೂನ್(Sky Balloon) ಹಾರಿಸಲಾಯಿತು.

ಬಿಬಿಎಂಪಿ ಎಲ್ಲಾ ವಲಯಗಳ ವ್ಯಾಪ್ತಿಯಲ್ಲಿ ಗಾಳಿ ಪಟ ಹಾರಾಟ:

> ಬೆಂಗಳೂರು ನಗರದ ಆಯಾ ವಲಯ ವ್ಯಾಪ್ತಿಯಲ್ಲಿ ಆಯ್ದ ಆಟದ ಮೈದಾನಗಳಲ್ಲಿ ನಾಗರಿಕರ ಸಹಭಾಗಿತ್ವದೊಂದಿಗೆ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸಲಾಯಿತು.

ಬಿಬಿಎಂಪಿ ಕಛೇರಿಗಳಲ್ಲಿ ದೀಪ ಹಣತೆ ಹಚ್ಚುವಿಕೆ.

> ಪಾಲಿಕೆ ಕೇಂದ್ರ ಕಛೇರಿ, ವಲಯ ಕಛೇರಿಗಳು, ವಲಯ ಕಛೇರಿಗಳು ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ರಾತ್ರಿ 7 ಗಂಟೆಗೆ ಹಣತೆ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಲಾಯಿತು.

Loading

Leave a Reply

Your email address will not be published. Required fields are marked *