ನಾಲ್ಕು ವರ್ಷಗಳ ಬಳಿಕ ಗೃಹಬಂಧನದಿಂದ ಬಿಡುಗಡೆಯಾದ ಕಾಶ್ಮೀರ ಪ್ರತ್ಯೇಕತಾವಾದಿ

ಶ್ರೀನಗರ: ನಾಲ್ಕು ವರ್ಷಗಳ ಕಾಲ ಗೃಹ ಬಂಧನದಲ್ಲಿದ್ದ ಹುರಿಯತ್ ಕಾನ್ಫರೆನ್ಸ್ (Hurriyat Conference) ಮುಖ್ಯಸ್ಥ ಮಿರ್ವೈಜ್ ಉಮರ್ ಫಾರೂಕ್ (Mirwaiz Umar Farooq) ಈಗ ಬಿಡುಗಡೆಯಾಗಿದ್ದಾರೆ.

ಜಮ್ಮು (Jammu) ಮತ್ತು ಕಾಶ್ಮೀರಕ್ಕೆ (Kashmir) ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು (Article 370) ಕೇಂದ್ರಸರ್ಕಾರ ರದ್ದುಗೊಳಿಸುವ ಸಮಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರ ಮಿರ್ವೈಜ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿ ಇರಿಸಿತ್ತು.

ಹಿರಿಯ ಪೊಲೀಸ್ ಅಧಿಕಾರಿಗಳು ಗುರುವಾರ ಮಿರ್ವೈಜ್ ಅವರ ನಿವಾಸಕ್ಕೆ ಭೇಟಿ ನೀಡಿ ಬಿಡುಗಡೆ ಮಾಡುತ್ತಿರುವ ವಿಚಾರವನ್ನು ತಿಳಿಸಿದ್ದರು. ಅಷ್ಟೇ ಅಲ್ಲದೇ ಶುಕ್ರವಾರದ ಪ್ರಾರ್ಥನೆಗಾಗಿ ಶ್ರೀನಗರ ಜಾಮಿಯಾ ಮಸೀದಿಗೆ (Jamia Masjid) ಹೋಗಲು ಅವಕಾಶ ನೀಡಿದ್ದರು. ಗೃಹ ಬಂಧನದಿಂದ ಬಿಡುಗಡೆಯಾದ ಬಳಿಕ ಶುಕ್ರವಾರ ಮಿರ್ವೈಜ್ ಉಮರ್ ಜಾಮಿಯಾ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದರು.

Loading

Leave a Reply

Your email address will not be published. Required fields are marked *