ಕಟೀಲ್ ಅವರೇ ಬಡವರ ಶಾಪ ನಿಮಗೆ ತಟ್ಟದೇ ಬಿಡುವುದಿಲ್ಲ – ದಿನೇಶ್ ಗುಂಡೂರಾವ್

ಬೆಂಗಳೂರು ;- ಕೇಂದ್ರ ಸರ್ಕಾರ ಎಲ್ಲವನ್ನೂ ಕರ್ನಾಟಕಕ್ಕೆ ಕೊಡಲಿ ಎಂಬ ಸ್ವಾರ್ಥ ನಮ್ಮಲ್ಲಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಮಾತ್ರ ಮುಖ್ಯವಲ್ಲ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯ ವಿರುದ್ಧ ಕಿಡಿಕಾರಿರುವ ಗುಂಡೂರಾವ್, ಕಟೀಲ್‌ರವರೇ,ನೀವು ಮನೆಗೆ ಮಾರಿ, ಪರರಿಗೆ ಉಪಕಾರಿ.

 

ನಿಮ್ಮ ಈ ಮನೆಮುರಕುತನಕ್ಕೆ ಈಗಾಗಲೇ ಜನ ಪಾಠ ಕಲಿಸಿದ್ದಾರೆ‌.‌ ಆದರೂ ನಿಮಗೆ ಬುದ್ದಿ ಬಂದಿಲ್ಲ. ಕೇಂದ್ರ ಎಲ್ಲವನ್ನೂ ಕರ್ನಾಟಕಕ್ಕೆ ಕೊಡಲಿ ಎಂಬ ಸ್ವಾರ್ಥ ನಮ್ಮಲ್ಲಿಲ್ಲ. ಗೋದಾಮುಗಳಲ್ಲಿ ಅಕ್ಕಿಯನ್ನು ಕೊಳೆಯಿಸುವ ಬದಲು ಬಡವರಿಗೆ ಕೊಡಿ ಎಂದಿದ್ದೇವೆ. ಅದೂ ಮಾರುಕಟ್ಟೆ ದರದಲ್ಲಿ. ಇದು ತಪ್ಪೇ? ಎಂದು ಪ್ರಶ್ನಿಸಿದ್ದಾರೆ.

ನೀವು ಈ ರಾಜ್ಯದ ಮನೆ ಮಗನಾಗಿ ಬಡವರ ಹೊಟ್ಟೆ ತುಂಬಿಸುವ ಅನ್ನಭಾಗ್ಯ ಯೋಜನೆಗೆ ಹೆಗಲು ಕೊಡಬೇಕು. ರಾಜ್ಯದ ಬಡವರಿಗೆ ಅಕ್ಕಿ ಕೊಡದೇ ದ್ವೇಷದ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದು ಕೇಂದ್ರ ನಾಯಕರಿಗೆ ತಿಳಿಹೇಳಬೇಕು. ಅದು ಬಿಟ್ಟು ಮೋದಿಯವರ ದ್ವೇಷದ ಬೆಂಕಿಗೆ ನೀವೇ ತುಪ್ಪ ಸುರಿದರೆ ಬಡವರ ಶಾಪ ನಿಮಗೆ ತಟ್ಟದಿರುತ್ತದೆಯೇ? ಎಂದು ಹೇಳಿದ್ದಾರೆ.

Loading

Leave a Reply

Your email address will not be published. Required fields are marked *