ನವೆಂಬರ್‌ 18 ಮತ್ತು 19 ರಂದು KEA Exam

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನವೆಂಬರ್‌ 18 ಮತ್ತು 19 ರಂದು ನಡೆಸಲಿರುವ ನಿಗಮ-ಮಂಡಳಿಗಳ ಪರೀಕ್ಷೆಗೆ ಮತ್ತಷ್ಟು ಟಫ್‌ ರೂಲ್ಸ್‌ (Tough Rules) ಜಾರಿ ಮಾಡಿದೆ.

ನೇರ ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು ಅ‍ಭ್ಯರ್ಥಿಗಳು ವಸ್ತ್ರ ಸಂಹಿತೆ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಸೂಕ್ಷ್ಮ ಕೇಂದ್ರಗಳಲ್ಲಿ ಪೊಲೀಸರಿಂದ (Police ತಪಾಸಣೆ ನಡೆಸಲಾಗುತ್ತದೆ. ಅಷ್ಟೇ ಅಲ್ಲದೇ ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಿದೆ.

ಏನೇನುರೂಲ್ಸ್‌?
– ಡ್ರೆಸ್ ಕೋಡ್ (Dress Code) ಜಾರಿಯಾಗಿದ್ದು, ಪರೀಕ್ಷೆಯ ದಿನದಂದು ತುಂಬುತೋಳಿನ ಶರ್ಟ್ ಧರಿಸುವಂತಿಲ್ಲ.
– ಅಭ್ಯರ್ಥಿಗಳಿಗೆ ಜೇಬು ಇಲ್ಲದ ಅಥವಾ ಕಡಿಮೆ ಜೇಬಿರುವ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಸೂಚನೆ.
– ಕುರ್ತಾ, ಪೈಜಾಮ, ಜೀನ್ಸ್ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಇರುವುದಿಲ್ಲ.
– ಧರಿಸುವ ಬಟ್ಟೆಗಳು ಹಗುರವಾಗಿದ್ದು ದೊಡ್ಡ ಎಂಬ್ರಾಯಿಡರಿ, ಜಿಪ್ ಪಾಕೆಟ್‌ಗಳು, ದೊಡ್ಡ ಬಟನ್‌ಗಳು – ಇವುಗಳನ್ನು ಹೊಂದಿರಬಾರದು.
– ಅಭ್ಯರ್ಥಿಗಳು ಶೂ ಹಾಕಿಕೊಂಡು ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದ್ದು, ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸಬೇಕು.

ಮಹಿಳಾ ಅಭ್ಯರ್ಥಿಗಳಿಗೆ ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ಅಭ್ಯರ್ಥಿಯು ಕುತ್ತಿಗೆಯ ಸುತ್ತ ಲೋಹದ ಆಭರಣ ಧರಿಸುವುದು ಅಥವಾ ಕಿವಿಯೋಲೆ, ಉಂಗುರ, ಕಡಗ ಧರಿಸುವುದನ್ನು ನಿರ್ಬಂಧಿಸಲಾಗಿದೆ.
– ಬ್ಲೂಟೂತ್ ಸಾಧನ ಬಳಕೆಗೆ ಆಸ್ಪದವಾಗಬಾರದೆಂದು ತಲೆಯ ಮೇಲೆ ಟೋಪಿ ಅಥವಾ ಯಾವುದೇ ವಸ್ತ್ರ ಧರಿಸುವಂತಿಲ್ಲ. ಬಾಯಿ, ಕಿವಿ ಹಾಗೂ ತಲೆ ಮುಚ್ಚುವ ರೀತಿಯಲ್ಲಿ ಯಾವುದೇ ವಸ್ತ್ರ/ ಸಾಧನ ಧರಿಸುವುದನ್ನು ನಿಷೇಧಿಸಲಾಗಿದೆ.
– ಯಾವುದೇ ರೀತಿಯ ಮಾಸ್ಕ್ ಸಹ ಧರಿಸುವಂತಿಲ್ಲ. ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್ ಮತ್ತು ಕೈಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿ ಇಲ್ಲ
– ಪೆನ್ಸಿಲ್, ಪೇಪರ್, ರಬ್ಬರ್‌, ಜಾಮಿಟ್ರಿ ಬಾಕ್ಸ್ ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಕ್ಕೆ ತೆಗೆದುಕೊಂಡು ಹೋಗುವಂತಿಲ್ಲ.

– ಇತ್ತೀಚಿನ ಎರಡು ಪಾಸ್ ಪೋರ್ಟ್ ಅಳತೆಯ ಫೋಟೋ ಕೊಂಡೊಯ್ಯಬೇಕು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿ ಹೊಂದಿರುವುದು ಕೂಡ ಕಡ್ಡಾಯ.
– ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.

ಒಂದುಕೇಂದ್ರದಲ್ಲಿಮಾತ್ರಪರೀಕ್ಷೆ

ವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಈಗಾಗಲೇ ಲಿಂಕ್ ನೀಡಲಾಗಿದೆ. ಕೆಲವು ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಿರುವ ಕಾರಣ ಒಂದಕ್ಕಿಂತ ಹೆಚ್ಚು ಪ್ರವೇಶ ಪತ್ರಗಳು ಬಿಡುಗಡೆಯಾಗಿರುತ್ತದೆ.
– ಇಂತಹ ಅಭ್ಯರ್ಥಿಗಳು ಮಾತ್ರ ಯಾವುದಾದರೂ ಒಂದು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಬರೆಯತಕ್ಕದ್ದು, ಪರೀಕ್ಷಾ ದಿನದಂದು ಎರಡೂ ಪ್ರವೇಶ ಪತ್ರಗಳನ್ನು ಕೊಠಡಿಯ ಮೇಲ್ವಿಚಾರಕರಿಗೆ ಸಲ್ಲಿಸಬೇಕು.

ಪೊಲೀಸ್ಸಿಬ್ಬಂದಿನಿಯೋಜನೆ
– ಅಭ್ಯರ್ಥಿಗಳ ಸೂಕ್ತ ತಪಾಸಣೆಗಾಗಿ ಪ್ರತಿ ಪರೀಕ್ಷಾ ಕೇಂದ್ರದಲ್ಲೂ 25 ವಿದ್ಯಾರ್ಥಿಗಳ ಗುಂಪಿಗೆ ಒಬ್ಬರಂತೆ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು.
– ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಮೆಟಲ್ ಡಿಟೆಕ್ಟರ್ ಮತ್ತು ಪೊಲೀಸ್ ಇಲಾಖೆಗೆ ಸೂಕ್ತವೆನಿಸುವ ಇತರೆ ಉಪಕರಣಗಳನ್ನು ಬಳಸಿ ತಪಾಸಣೆಗೆ ಒಳಪಡಿಸಬೇಕು.
– ಪರೀಕ್ಷೆ ನಡೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ಯಾವುದೇ ಕಾರು, ಮಿನಿ ಬಸ್ ವಾಹನಗಳನ್ನು ನಿಲ್ಲಿಸದಂತೆ ನಿರ್ಬಂಧ ಹಾಕಬೇಕು.

ಪರೀಕ್ಷಾ ಕೇಂದ್ರದ ಸುತ್ತ ಇರುವ ಹೋಟೆಲ್, ಪೇಯಿಂಗ್ ಗೆಸ್ಟ್, ವಸತಿ ನಿಲಯಗಳು ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿರುವ ವ್ಯಕ್ತಿಗಳನ್ನು ಪರಿಶೀಲಿಸಬೇಕು
– ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಕ್ರಮ ಕಂಡು ಬಂದಲ್ಲಿ ಆಯಾ ವ್ಯಾಪ್ತಿಯ ಪೊಲೀಸ್ ಕಮಿಷನರ್ ಅವರನ್ನು/ಪೊಲೀಸ್ ವರಿಷ್ಠಾಧಿಕಾರಿಯವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು.

Loading

Leave a Reply

Your email address will not be published. Required fields are marked *