ಮಧ್ಯಪ್ರದೇಶ ;- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ಮಧ್ಯಪ್ರದೇಶದಲ್ಲಿ ಜಾತಿವಾರು ಜನಗಣತಿ ನಡೆಸಿಸಲಾವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ. ಈ ವರ್ಷಾಂತ್ಯಕ್ಕೆ ಚುನಾವಣೆ ಎದುರಿಸಲಿರುವ ಮಧ್ಯಪ್ರದೇಶದ ಬುಂದೇಲ್ಖಂಡ ಪ್ರದೇಶಕ್ಕೆ ಭೇಟಿ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,
ರೈತರು, ಮಹಿಳೆಯರು, ಹಿಂದುಳಿದ ಸಮುದಾಯಗಳನ್ನು ಸೆಳೆಯುವ ಹಲವು ಉಚಿತ ಯೋಜನೆಗಳನ್ನು ಘೋಷಿಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ಮಧ್ಯಪ್ರದೇಶದಲ್ಲಿ ಜಾತಿವಾರು ಜನಗಣತಿ ನಡೆಸಿಸಲಾವುದು ಎಂದು ಹೇಳಿದ್ದಾರೆ.
ರೈತರ ಸಾಲಮನ್ನಾ, ಮಹಿಳಾ ಸಬಲೀಕರಣಕ್ಕಾಗಿ ಪ್ರತಿ ಮಹಿಳೆಗೂ ತಿಂಗಳಿಗೆ 1500 ರು. ಸಹಾಯಧನ ನೀಡಲಾಗುವುದು. ಪ್ರತಿ ಕುಟುಂಬಕ್ಕೆ ಅನಿವಾರ್ಯವಾಗಿರುವ ಗ್ಯಾಸ್ ಸಿಲಿಂಡರ್ಗಳನ್ನು 500 ರು.ಗೆ ನೀಡಲಾಗುವುದು. 100 ಯುನಿಟ್ವರೆಗೆ ಉಚಿತ ವಿದ್ಯುತ್ ಸಹ ನೀಡಲಾಗುವುದು ಎಂದು ಮಲ್ಲಿಕಾರ್ಜುನ್ ಖರ್ಗೆ ಗ್ಯಾರಂಟಿ ಭರವಸೆಯನ್ನ ನೀಡಿದ್ದಾರೆ.
ಕಾಂಗ್ರೆಸ್ ದೇಶಕ್ಕೆ ಸಂವಿಧಾನವನ್ನು ನೀಡಿ ಪ್ರಜಾಪ್ರಭುತ್ವವನ್ನು ರಕ್ಷಿಸಿದ ಕಾರಣದಿಂದ ಇಂದು ಮಧ್ಯಪ್ರದೇಶದ ನರೇಂದ್ರ ಮೋದಿ ಮತ್ತು ಶಿವರಾಜ್ ಸಿಂಗ್ ಚೌಹಾಣ್ ಪ್ರಧಾನಿ ಮತ್ತು ಶಿವರಾಜ್ ಸಿಂಗ್ ಚೌಹಾಣ್ ಮುಖ್ಯಮಂತ್ರಿಯಾಗಿದ್ದಾರೆ ಎಂದು ಹೇಳಿದರು.