ರಾಂಚಿ: ಭಾರತ ಮತ್ತು ಇಂಗ್ಲೆಂಡ್ (Ind vs Eng) ನಡುವೆ ಇದೇ ಫೆಬ್ರವರಿ 23 ರಿಂದ 27ರ ವರೆಗೆ ನಡೆಯಲಿರುವ 4ನೇ ಟೆಸ್ಟ್ ಪಂದ್ಯಕ್ಕೆ ಬ್ಯಾಟಿಂಗ್ ಪಿಲ್ಲರ್ ಕೆ.ಎಲ್ ರಾಹುಲ್ (KL Rahul) ಟೀಂ ಇಂಡಿಯಾಕ್ಕೆ ಕಂಬ್ಯಾಕ್ ಮಾಡಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಫೆಬ್ರವರಿ 23 ರಂದು ರಾಂಚಿಯಲ್ಲಿರುವ JSCA ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಅಂದು ಬೆಳಗ್ಗೆ 9:30 ರಿಂದ ಅರಂಭವಾಗಲಿದೆ. ಗಾಯದ ಸಮಸ್ಯೆಯಿಂದಾಗಿ ಕಳೆದ ಮೂರು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದ ಕೆ.ಎಲ್ ರಾಹುಲ್, ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಹಿನ್ನೆಲೆಯಲ್ಲಿ 4ನೇ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಪರ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿದೆ.
ಈ ಬಗ್ಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಸಹ ಸುಳಿವು ಕೊಟ್ಟಿದ್ದಾರೆ. ಇಂಗ್ಲೆಂಡ್ ವಿರುದ್ಧ 3ನೇ ಟೆಸ್ಟ್ ಪಂದ್ಯದ ಗೆಲುವಿನ ಬಳಿಕ ಪೋಸ್ಟ್ ಪ್ರೆಸೆಂಟೇಷನ್ನಲ್ಲಿ ಮಾತನಾಡಿದ ರೋಹಿತ್, ರಾಹುಲ್ ಸಂಪೂರ್ಣ ಗುಣಮುಖರಾದಂತೆ ತೋರುತ್ತದೆ ಅಂತ ಹೇಳಿದ್ದಾರೆ.