ಭೂಕುಸಿತ ಉಂಟಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಕೃಷ್ಣಭೈರೇಗೌಡ

ಬೆಂಗಳೂರು: ಭೂಕುಸಿತ ಉಂಟಾಗದಂತೆ ಎಚ್ಚರಿಕೆ ವಹಿಸಲು ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಕೃಷ್ಣಭೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 2018ರಲ್ಲಿ ಕೊಡಗು ಭಾಗದಲ್ಲಿಯೇ ಭೂ ಕುಸಿತದಿಂದ 21ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು. ರಾಜ್ಯದಲ್ಲಿ ಮತ್ತೊಮ್ಮೆ ಇಂತಹ ಕಹಿ ಘಟನೆಗಳು ಸಂಭವಿಸಬಾರದು. ಈ ಬಾರಿ ಮೂಡಿಗೆರೆ, ಸುಳ್ಯ, ಭಾಗಮಂಡಲ, ಮಡಿಕೇರಿ, ವಿರಾಜಪೇಟೆ, ಸಕಲೇಶಪುರ ಸೇರಿ ಕೆಲವು ಭಾಗಗಳಲ್ಲಿ ಭೂ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಹೀಗಾಗಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕೆಂದು ಕೃಷ್ಣಬೈರೇಗೌಡ ಸೂಚನೆ ನೀಡಿದ್ದಾರೆ.

Loading

Leave a Reply

Your email address will not be published. Required fields are marked *