ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿಗೆ ಹೋಗುವ ಕಾಲ ದೂರವಿಲ್ಲ ಎಂಬ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ನಾಯಕರ ಜೊತೆ ಇದೇ ವಿಚಾರಕ್ಕೆ ಒಪ್ಪಂದ ಮಾಡಿಕೊಂಡು ಬಂದಿರಬೇಕು ಎಂದು ಟಾಂಗ್ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ನಾಯಕರ ಬಳಿ ಡಿ.ಕೆ.ಶಿವಕುಮಾರ್ ಅವರನ್ನು ಜೈಲಿಗೆ ಕಳುಹಿಸುವ ವಿಷಯವನ್ನೇ ಮಾತನಾಡಿಕೊಂಡು ಬಂದಿರಬೇಕು. ಹಾಗಾಗಿ ಈ ರೀತಿ ಹೇಳಿಕೆ ನೀಡಿದ್ದಾರೆ ಎಂದರು. ಬಿಜೆಪಿ ಲೀಡರ್ ಲೆಸ್ ಪಾರ್ಟಿ ಆಗಿದೆ. ವಿಪಕ್ಷ ನಾಯಕರೂ ಇಲ್ಲ, ರಾಜ್ಯಾಧ್ಯಕ್ಷರು ಇಲ್ಲ. ಹಂಗಾಮಿ ಅಧ್ಯಕ್ಷರಿದ್ದಾರೆ. ಹಾಗಾಗಿ ಅಲ್ಲಿರೋರು ಕಾಂಗ್ರೆಸ್ಗೆ ಬರುತ್ತಿದ್ದಾರೆ. ಬಹುಶಃ ಲೋಕಸಭೆ ಚುನಾವಣೆ ದೃಷ್ಟಿಯಿಂದ ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.