ಕಳೆದ ವರ್ಷ ನಾವು ಭಾರತ-ಆಸಿಯಾನ್ ಸ್ನೇಹ ದಿನವನ್ನು ಆಚರಿಸಿದ್ದೇವೆ: ಪ್ರಧಾನಿ ನರೇಂದ್ರ ಮೋದಿ

ಜಕಾರ್ತ: ಈ ಶೃಂಗಸಭೆಯ ಸಹ ಅಧ್ಯಕ್ಷರಾಗಿರುವುದು ನನಗೆ ಹೆಮ್ಮೆ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಆಸಿಯಾನ್ (ASEAN)-ಭಾರತ (INDIA) ಮತ್ತು ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇಂಡೋನೇಷ್ಯಾಕ್ಕೆ (Indonesia) ಆಗಮಿಸಿದ್ದು, ಆಯಕಟ್ಟಿನ ಪ್ರಮುಖ ಪ್ರದೇಶದ ದೇಶಗಳೊಂದಿಗೆ ಭಾರತದ ಪಾಲುದಾರಿಕೆಯ ಭವಿಷ್ಯದ ಬಾಹ್ಯರೇಖೆಯನ್ನು ಚರ್ಚಿಸಲಿದ್ದಾರೆ. ಜಕಾರ್ತದಲ್ಲಿ (Jakarta) ನಡೆದ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ವರ್ಷ ನಾವು ಭಾರತ-ಆಸಿಯಾನ್ ಸ್ನೇಹ ದಿನವನ್ನು ಆಚರಿಸಿದ್ದೇವೆ ಮತ್ತು ಅದಕ್ಕೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ರೂಪವನ್ನು ನೀಡಿದ್ದೇವೆ ಎಂದರು.

ನಮ್ಮ ಪಾಲುದಾರಿಕೆಯು ನಾಲ್ಕನೇ ದಶಕವನ್ನು ತಲುಪಿದೆ. ಈ ಶೃಂಗಸಭೆಯ ಸಹ ಅಧ್ಯಕ್ಷರಾಗಿರುವುದು ನನಗೆ ಹೆಮ್ಮೆ ತಂದಿದೆ. ಈ ಶೃಂಗಸಭೆ ಆಯೋಜಿಸಿದ್ದಕ್ಕಾಗಿ ಇಂಡೋನೇಷ್ಯಾದ ಅಧ್ಯಕ್ಷ ಜೋಕೋ ವಿಡೋಡೋ ಅವರನ್ನು ನಾನು ಅಭಿನಂದಿಸುತ್ತೇನೆ. ಭಾರತ ಮತ್ತು ಆಸಿಯಾನ್ ಮಧ್ಯೆ ಉತ್ತಮ ಬಾಂಧವ್ಯವಿದೆ. ಶಿಕ್ಷಣ, ರಕ್ಷಣೆ ಮತ್ತು ಪ್ರವಾಸೋದ್ಯಮ ವಿಷಯಗಳಲ್ಲಿ ಪರಸ್ಪರ ಸಹಕಾರವನ್ನು ನೀಡಿದೆ. ಆಸಿಯಾನ್ ದೇಶದ ಅಭಿವೃದ್ಧಿಗೆ ಭಾರತ ಸಹಕರಿಸಲಿದೆ ಎಂದು ಹೇಳಿದರು.

ಇದಕ್ಕೂ ಮೊದಲು ಪ್ರಧಾನಿ ಮೋದಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಜಕಾರ್ತದಲ್ಲಿ ಬಂದಿಳಿದಿದ್ದೇನೆ. ಆಸಿಯಾನ್ ಸಂಬಂಧಿತ ಸಭೆಗಳನ್ನು ಎದುರು ನೋಡುತ್ತಿದ್ದೇನೆ. ವಿಶ್ವವನ್ನು ಉತ್ತಮವಾಗಿಸುವ ಸಲುವಾಗಿ ವಿವಿಧ ನಾಯಕರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಬರೆದು ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದರು. ಅಲ್ಲದೇ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಜಕಾರ್ತದಲ್ಲಿ ಪ್ರಧಾನಿ ಮೋದಿಯವರ ಫೋಟೋಗಳನ್ನು ತಮ್ಮ ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.

Loading

Leave a Reply

Your email address will not be published. Required fields are marked *