ಹುಬ್ಬಳ್ಳಿ: ಬಿ.ಎಲ್ ಸಂತೋಷವರು ಮೊದಲು ಪಕ್ಷದಲ್ಲಿದವರನ್ನು ಉಳಿಸಿಕೊಳ್ಳಲಿ. ಶಾಸಕರನ್ನು, ಮಾಜಿ ಶಾಸಕರನ್ನು ಉಳಸಿಕೊಳ್ಳಲಿ. ಪಕ್ಷದ ಅಸ್ತಿತ್ವ ಉಳಸಿಕೊಂಡರೆ ಸಾಕಾಗಿದೆ. ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಹೊಸ ಸರ್ಕಾರ ಮಾಡೋದನ್ನು ಬಿಟ್ಟು ಬಿಡಲಿ. ಬರೀ ಆಪರೇಶನ್ ಮಾಡಿ ಸರ್ಕಾರ ರಚನೆ ಮಾಡೋದಾ? ಇಡೀ ರಾಷ್ಟ್ರದಲ್ಲಿ ಆಪರೇಶನ್ ಮಾಡುವುದು. ಕರ್ನಾಟಕದಲ್ಲಿ ಬಿಜೆಪಿಗೆ ಒಂದು ಸಲವೂ ಬಹುಮತ ಬರಲಿಲ್ಲ ಎಂದು ಕೆಲ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂಬ ಬಿ.ಎಲ್ ಸಂತೋಷ ಹೇಳಿಕೆಗೆ ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದರು.