ಬಿಜೆಪಿಗೆ ತಾಕತ್ತಿದ್ದರೆ ಚೀನಾ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡಲಿ: ಓವೈಸಿ ಸವಾಲ್

ಹೈದರಾಬಾದ್: ಬಿಜೆಪಿಗೆ (BJP) ತಾಕತ್ತಿದ್ದರೆ ಚೀನಾದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸುವಂತೆ ಎಐಎಂಐಎಂ (AIMIM) ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಸವಾಲು ಹಾಕಿದ್ದಾರೆ. ಬಿಜೆಪಿ ಮುಖಂಡ ಬಂಡಿ ಸಂಜಯ್ ಕುಮಾರ್ ಅವರ ಸರ್ಜಿಕಲ್ ಸ್ಟ್ರೈಕ್ (Surgical Strike) ಹೇಳಿಕೆಗೆ ಓವೈಸಿ ಟಾಂಗ್ ಕೊಟ್ಟಿದ್ದಾರೆ.

ಸಂಗಾರೆಡ್ಡಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡನ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ತಮ್ಮದೇ ದೇಶದ ನಗರದಲ್ಲಿ ಸರ್ಜಿಕಲ್ ಸ್ಟ್ರೈಕ್ ಮಾಡುವುದಾಗಿ ಅವರು ಹೇಳುತ್ತಾರೆ. ಧೈರ್ಯವಿದ್ದರೆ ಚೀನಾದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲಿ ಎಂದು ಕುಟುಕಿದ್ದಾರೆ
2020ರ ಹೈದರಾಬಾದ್ (Hyderabad) ಮುನ್ಸಿಪಲ್ ಚುನಾವಣೆಯ (Municipal Election) ವೇಳೆ ಬಂಡಿ ಸಂಜಯ್ ಕುಮಾರ್ ಅವರು, ಚುನಾವಣೆಯಲ್ಲಿ ಪಾಕಿಸ್ತಾನ (Pakistan), ಅಫ್ಘಾನಿಸ್ತಾನ ಅಥವಾ ರೋಹಿಂಗ್ಯಾ (Rohingya) ಸಮುದಾಯದ ಮತದಾರರನ್ನು ಒಳಗೊಂಡಿರಬಾರದು. ಒಮ್ಮೆ ನಾವು ಗೆದ್ದರೆ ನಗರದಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸುತ್ತೇವೆ ಎಂದಿದ್ದರು. ಇದಕ್ಕೆ ಓವೈಸಿ ತಿರುಗೇಟು ನೀಡಿದ್ದಾರೆ.

Loading

Leave a Reply

Your email address will not be published. Required fields are marked *