ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ನಲ್ಲಿ ಇದೀಗ ಸಿಎಂ ಸ್ಥಾನಕ್ಕೆ ಪೈಪೋಟಿ ಶುರುವಾಗಿದ್ದು, ಇಂದು ಹೈಕಮಾಂಡ್ ಸಿಎಂ ಹುದ್ದೆ ಆಯ್ಕೆ ಸಂಬಂಧ ಮಹತ್ವದ ಚರ್ಚೆ ನಡೆಸಲಿದೆ.
ಇದರ ನಡುವೆ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿ ಎಂದು ಅವರ ಬೆಂಬಲಿಗರು, ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಕ್ಯಾಂಪೇನ್ ಆರಂಭಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಆಗಲಿ, ಖರ್ಗೆ ಸಿಎಂ ಆಗಲು ಎಲ್ಲರೂ ಬೆಂಬಲಿಸಬೇಕು ಎಂದು ಖರ್ಗೆ ಪರ ಕ್ಯಾಂಪೇನ್ ನಡೆಯುತ್ತಿದೆ. ಈಗಾಗಲೇ 3 ಬಾರಿ ಸಿಎಂ ಸ್ಥಾನದಿಂದ ವಂಚಿತರಾಗಿರುವ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕು, ಸಿಎಂ ಹುದ್ದೆಗೆ ಅವರು ಸಮರ್ಥ ಅನುಭವಿ ವ್ಯಕ್ತಿ ಅವರು ಸಿಎಂ ಆಗಬೇಕು ಎಂದು ಖರ್ಗೆ ಬೆಂಬಲಿಗರು, ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಕ್ಯಾಂಪೇನ್ ಆರಂಭಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ನಲ್ಲಿ ಇದೀಗ ಸಿಎಂ ಸ್ಥಾನಕ್ಕೆ ಪೈಪೋಟಿ ಶುರುವಾಗಿದ್ದು, ಇಂದು ಹೈಕಮಾಂಡ್ ಸಿಎಂ ಹುದ್ದೆ ಆಯ್ಕೆ ಸಂಬಂಧ ಮಹತ್ವದ ಚರ್ಚೆ ನಡೆಸಲಿದೆ.