ಲೋಕಸಭೆ ಚುನಾವಣೆ; ಇಂದು ಮತ್ತೆ ಆರು ಜಿಲ್ಲೆಗಳ ಶಾಸಕರೊಂದಿಗೆ ಸಿಎಂ, ಡಿಸಿಎಂ ಸಭೆ

ಬೆಂಗಳೂರು: ಲೋಕಸಭೆ ಚುನಾವಣೆ ಗಂಭೀರವಾಗಿ ಪರಿಗಣಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಅವರು ಇಂದು ಮತ್ತೆ ಆರು ಜಿಲ್ಲೆಗಳ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ. ಬೆಳಗ್ಗೆ ರಾಯಚೂರು, ವಿಜಯಪುರ, ಕೊಪ್ಪಳ ಜಿಲ್ಲೆಗಳು ಹಾಗೂ ಸಂಜೆ ಬೆಳಗಾವಿ, ಹಾವೇರಿ, ಕಲಬುರಗಿ ಜಿಲ್ಲೆಗಳ ಶಾಸಕರು, ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ. ಜೊತೆಗೆ ಸಂಜೆ 7 ಗಂಟೆಯಿಂದ ಸಂಸದರು, ರಾಜ್ಯಸಭಾ ಸದಸ್ಯರು, ವಿಧಾನಸಭಾ ಸದಸ್ಯರು, ಪರಿಷತ್ ಸದಸ್ಯರ ಜತೆ ವಿಡಿಯೋ ಸಂವಾದ ಮಾಡಲಿದ್ದಾರೆ.

Loading

Leave a Reply

Your email address will not be published. Required fields are marked *