ಮಂಡ್ಯ :- ಸೋಮವಾರ ಬೆಳ್ಳಂಬೆಳ್ಳಿಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಆಸ್ತಿ ಮೀರಿ ಆದಾಯ ಗಳಿಸಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳ ಮನೆಯ ಮೇಲೆ ದಾಳಿ ನಡೆಸಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತೈಲೂರು ಗ್ರಾಮದಲ್ಲೂ ಕೂಡ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗೆ ಶಾಕ್ ನೀಡಿದ್ದಾರೆ. ಬೆಂಗಳೂರಿನ ಕೆಐಎಡಿಬಿ ಇಂಜಿನಿಯರ್ ಶಶಿಕುಮಾರ್ ಅವರ ಮನೆ ಹಾಗೂ ತೋಟದ ಮನೆಗಳಿಗೆ 10 ಕ್ಕೂ ಹೆಚ್ಚು ಅಧಿಕಾರಿಗಳೂ ಬೆಳಿಗಿನ ಜಾವ 4.30 ರ ವೇಳೆಗೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನು ಮಳವಳ್ಳಿ ತಾಲೂಕಿನ ನಂಜೇಗೌಡನದೊಡ್ಡಿಯ ಕೊಳಚೆ ನಿರ್ಮೂಲನಾ ಮಂಡಳಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಬಾಲರಾಜ್ ಅವರ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸ ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ. ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.