ಉಡುಪಿ: ಸಲಿಂಗಿ ವಿವಾಹ (Same Sex Marriage) ಕುರಿತಾಗಿ ಸುಪ್ರೀಂಕೋರ್ಟ್ (Supreme Court) ತೀರ್ಪು ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಪ್ರತಿಕ್ರಿಯೆ ನೀಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಸಲಿಂಗಿ ಮದುವೆ ಸೃಷ್ಟಿಗೆ ವಿರುದ್ಧ ಎಂದರು.ಇದನ್ನು ನಾನು ಒಪ್ಪಲ್ಲ. ಅತ್ಯಂತ ಅಸಹ್ಯವಾದ ಪ್ರಕ್ರಿಯೆ,
ಕಾನೂನು ಮಾನ್ಯತೆ ನೀಡುವುದು ಸರಿಯಲ್ಲ. ಸಂಗಿಂಗ ವಿವಾಹದ ವಿರುದ್ಧ ಕೇಂದ್ರ ವಾದವನ್ನು ಮಂಡಿಸಿದ್ದು, ಕೇಂದ್ರ ಸರ್ಕಾರದ ನಿಲುವು ಸರಿಯಿದೆ. ಸೃಷ್ಟಿಯ ವಿರುದ್ಧ ಕ್ರಿಯೆಗೆ ಕಾನೂನು ಮುದ್ರೆ ಸರಿಯಲ್ಲ. ಮದುವೆ ಪವಿತ್ರವಾದ ಬಂಧನ, ಅದಕ್ಕೆ ಕಳಂಕ ಬೇಡ. ಬೇಕಾದಷ್ಟು ಪ್ರೀತಿ ಮಾಡಿ ಅಡ್ಡಿಯಿಲ್ಲ, ಸಲಿಂಗಿ ಮದುವೆ ಬೇಡ ಎಂದರು.