ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ #ಹೆಬ್ಬಗೋಡಿ ನಗರಸಭೆ ವ್ಯಾಪ್ತಿಯ ತಿರುಪಾಳ್ಯ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಲಾಯಿತು.
ಮಳೆಯಲ್ಲೂ ಸಾವಿರಾರು ಬಿಜೆಪಿ ಕಾರ್ಯಕರ್ತರು ಬೈಕ್ ರ್ಯಾಲಿಯಲ್ಲಿ ಭಾಗವಹಿಸಿ ಪ್ರಮುಖ ಬಡಾವಣೆಗಳಿಗೆ ಭೇಟಿ ನೀಡಿ ಜನರ ಬೆಂಬಲದ ಆಶೀರ್ವಾದ ಕೋರಿ ಮತಬಾಂಧವರಲ್ಲಿ ಮತಯಾಚಿಸಲಾಯಿತು.
ಜನ ಪರವಾಗಿರುವ ಬಿಜೆಪಿಗೆ ಈ ಬಾರಿ ಸ್ಪಷ್ಟ ಜನಾದೇಶ ಕೊಡುವ ಮೂಲಕ ಬೆಂಗಳೂರು ಮತ್ತು ಕರ್ನಾಟಕದ ಸರ್ವಾಂಗೀಣ ಪ್ರಗತಿಗೆ ಜತೆಯಾಗಿ ನಿಲ್ಲಲು ಜನತೆ ತೀರ್ಮಾನಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಪಂಗಿ ರಾಮರೆಡ್ಡಿ, ರಾಜಶೇಖರ ರೆಡ್ಡಿ ಮಂಜುನಾಥ್, ಓಬಳೇಶ್ ಸ್ಥಳೀಯ ಹಿರಿಯ ಮುಖಂಡರು,ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ಭಾಗವಹಿಸಿದ್ದರು.