ಮಾದಕ ಮುಕ್ತ ರಾಜ್ಯ ಮಾಡುವುದಕ್ಕೆ ನಾವು ಪಣ ತೊಟ್ಟಿದ್ದೇವೆ: ಸಚಿವ ಬಿ.ನಾಗೇಂದ್ರ

ಬೆಂಗಳೂರು: ಮಾದಕ ಮುಕ್ತ ರಾಜ್ಯ ಮಾಡುವುದಕ್ಕೆ ನಾವು ಪಣ ತೊಟ್ಟಿದ್ದೇವೆ. ಪ್ರತಿ ದಿನ ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಬಹಳಷ್ಟು ದೊಡ್ಡ ದೊಡ್ಡ ವ್ಯಕ್ತಿಗಳು ಮಾದಕ ವ್ಯಸನಿಗಳಾಗಿದ್ದಾರೆ. ಇಲಾಖೆ ಮಾದಕ ವಸ್ತು ಮುಕ್ತ ರಾಜ್ಯ ಮಾಡಲು ಹೊಣೆ ಹೊತ್ತಿದೆ. ಡ್ರಗ್ಸ್ ಮಾರಾಟ ಮಾಡುವವರ ಮೇಲೆ ಕಠಿಣ ಕೇಸ್ ಹಾಕುತ್ತೇವೆ. ಡ್ರಗ್ಸ್ ಮಾರಾಟಕ್ಕೆ ಕಡಿವಾಣ ಹಾಕಲು ಸಹಾಯವಾಣಿ ಓಪನ್ ಮಾಡುತ್ತೇವೆ. ಸಹಾಯವಾಣಿಗೆ ಕರೆ ಮಾಡುವವರ ಹೆಸರನ್ನು ಬಹಿರಂಗಪಡಿಸಲ್ಲ ಎಂದು ವಿಧಾನಸೌಧದ ಭವ್ಯ ಮೆಟ್ಟಿಲು ಬಳಿ ಆಯೋಜಿಸಲಾಗಿದ್ದ ಮಾದಕವಸ್ತು ವಿರೋಧಿ ದಿನ ಕಾರ್ಯಕ್ರಮದಲ್ಲಿ ಕ್ರೀಡಾ ಇಲಾಖೆ ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.

Loading

Leave a Reply

Your email address will not be published. Required fields are marked *