ಬೆಂಗಳೂರು: ನಗರದ ಸಿಲಿಕಾನ್ ಸಿಟಿಯಲ್ಲಿ ವ್ಯಕ್ತಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶೇಷಾದ್ರಿಪುರಂ ಮುಖ್ಯರಸ್ತೆಯ ಸ್ಲಂ ಬೋರ್ಡ್ ಆವರಣದಲ್ಲಿ ನಡೆದಿದೆ. ಜೋಸೆಫ್ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೇಟಿಂಗ್ ಕೆಲಸ ಮಾಡುತ್ತಿದ್ದ ಜೋಸೆಫ್ ಇತ್ತೀಚೆಗೆ ವಿಪರೀತ ಕುಡಿತದ ಚಟಕ್ಕೆ ದಾಸನಾಗಿದ್ದ.
ಕಾಲಿಗೆ ದಾರ ಕಟ್ಟಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಇದು ಆತ್ಮಹತ್ಯೆಯೋ ಕೊಲೆಯೋ ಎಂದು ಎಲ್ಲರಲ್ಲೂ ಅನುಮಾನ ಮೂಡಿದೆ. ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಆ ನಂತರ ಆತ್ಮಹತ್ಯೆಯೋ ಕೊಲೆಯೋ ಎಂದು ಗೊತ್ತಾಗಬೇಕಿದೆ.