ಮಂಡ್ಯ: ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯ ಮನ್ಮುಲ್ ಅಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಇಂದು ನಡೆದ ಮನ್ಮುಲ್ ಅಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ನ ಬೋರೇಗೌಡ ಅವರು ಗೆಲುವು ಸಾಧಿಸಿದ್ದಾರೆ. ನಾಲ್ವರು ಅಧಿಕಾರಿಗಳ ಜೊತೆಗೆ ಓರ್ವ ಬಿಜೆಪಿ ಬೆಂಬಲಿತ ಸ್ವಾಮಿಯ ನೆರವಿನಿಂದ ಅಧಿಕಾರ ಹಿಡಿವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಮಂಡ್ಯದಲ್ಲಿ ಜೆಡಿಎಸ್ ಮತ್ತೊಂದು ಅಧಿಕಾರ ಕಳೆದುಕೊಂಡಿದೆ.
ತೀವ್ರ ಕುತೂಹಲ ಮೂಡಿಸಿದ್ದ ಮನ್ ಮುಲ್ ಅಧ್ಯಕ್ಷ ಚುನಾವಣೆಯಲ್ಲಿ ಗೆಲ್ಲಲು 9 ಮತಗಳು ಬೇಕಿತ್ತು. ಈ ಪೈಕಿ ಕಾಂಗ್ರೆಸ್, ತನ್ನ ಪಕ್ಷದ ನಿರ್ದೇಶಕರು, ಓರ್ವ ನಾಮ ನಿರ್ದೇಶಕ ಸದಸ್ಯ, ನಾಲ್ವರು ಅಧಿಕಾರಿಗಳ ಬೆಂಬಲದ ಜೊತೆಗೆ ಬಿಜೆಪಿ ಬೆಂಬಲಿತ ಸ್ವಾಮಿಯ ನೆರವಿನಿಂದ ಗೆದ್ದು ಬೀಗಿದೆ. ಕೋರಂ ಅಭಾವ ಉಂಟಾಗಲಿ ಎಂದು ಇಂದು ಸಹ ಚುನಾವಣೆ ಪ್ರಕ್ರಿಯೆಗೆ ಜೆಡಿಎಸ್ ಬೆಂಬಲಿತ ನಿರ್ದೇಶಕರು ಗೈರಾಗಿದ್ದರು. ಆದ್ರೆ, ಜೆಡಿಎಸ್ ತಂತ್ರಕ್ಕೆ ಪ್ರತಿ ತಂತ್ರ ರೂಪಿಸಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ.