ತುಮಕೂರು:- ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಾಂಜಾ ಗಿಡ ಪತ್ತೆಯಾದ ಘಟನೆ ತುಮಕೂರಿನ ಸರಸ್ವತಿಪುರಂನಲ್ಲಿ ಜರುಗಿದೆ. ಈ ಸಂಬಂಧ ಖಚಿತ ಮಾಹಿತಿ ಮೇರೆಗೆ ಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಂಜಾ ಗಿಡವನ್ನು ವಶಕ್ಕೆ ಪಡೆದಿದ್ದಾರೆ.
17ನೇ ವಾರ್ಡ್ ನ ಸರಸ್ವತಿಪುರಂ 5 ಕ್ರಾಸ್ ನಲ್ಲಿರುವ ಖಾಲಿ ನಿವೇಶನದಲ್ಲಿ ಗಾಂಜಾ ಬೆಳೆಯಲಾಗಿತ್ತು. ಗಿಡದಲ್ಲಿ ಗಾಂಜಾ ಸೊಪ್ಪು ಕಿತ್ತುಕೊಂಡು ಹುಡುಗರು ಹೋಗುತ್ತಿದ್ದರು.
ಸ್ಥಳೀಯರ ಮಾಹಿತಿ ಆಧಾರದ ಮೇಲೆ ಸ್ಥಳಕ್ಕೆ ಭೇಟಿ ಕೊಟ್ಟು ಪೊಲೀಸರು ಪರಿಶೀಲನೆ ಮಾಡಿದ್ದಾರೆ. ನಿವೇಶನದ ಮಾಲೀಕನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದು, ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ