60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ: ದಿನೇಶ್ ಗುಂಡೂರಾವ್

ಮಡಿಕೇರಿ: ದೇಶದ ಕೆಲ ರಾಜ್ಯಗಳಲ್ಲಿ ಸೈಲೆಂಟ್ ಆಗಿ ಕೊರೋನಾ ಉಲ್ಬಣವಾಗ್ತಿರೋದು ಮತ್ತೆ ಆ ದಿನಗಳು ಬರುತ್ತಾ ಅನ್ನೋ ಪ್ರಶ್ನೆ ಮೂಡಿದೆ.. ಕೇರಳದಲ್ಲಿ ಕೊರೋನಾ ನರ್ತನದಿಂದ  ಅಲರ್ಟ್ ಆಗಿರೋ ರಾಜ್ಯ  ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ತಾಂತ್ರಿಕ ಸಲಹಾ ಸಮಿತಿ ಮೊರೆ ಹೋಗಿದೆ. ಹೌದು  ರಾಜ್ಯದಲ್ಲಿ ಕೊರೊನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಆದರೆ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ. ಇಂದಿನಿಂದಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ನಗರದಲ್ಲಿ ಮಾತಾನಾಡಿದ ಅವರು, ಮೊನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದೇವೆ. ರವಿ ಅವರ ನೇತೃತ್ವದಲ್ಲಿ ನಿನ್ನೆಯೂ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಯಾವ ಕ್ರಮ ತೆಗೆದುಕೊಳ್ಳಬೇಕು ಚರ್ಚೆ ನಡೆಸಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ಜೊತೆಗೂ ಚರ್ಚೆ ಮಾಡಿದ್ದಾರೆ. ಕೆಲವು ಸಲಹೆ ಮಾರ್ಗಸೂಚಿ ಪಡೆದಿದ್ದೇವೆ. 60 ವರ್ಷ ಮೇಲ್ಪಟ್ಟವರು ಮತ್ತು ಹೃದಯ, ಕಿಡ್ನಿ ಸಂಬಂಧಿತ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ಜ್ವರ, ಕಫ, ಶೀತ ಇರುವಂತಹವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ ಎಂದರು.

ಈಗಾಗಲೇ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜು ಆಗುವಂತೆಯೂ ಸೂಚನೆ ನೀಡಲಾಗಿದೆ. ಹಾಗೆಯೇ ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ಇಡುವಂತೆ ಸೂಚನೆ ಕೋಡಲಾಗಿದೆ. ಕೇರಳದಿಂದ ಬರುವವರ ಮೇಲೆ ಹೆಚ್ಚು ಟೆಸ್ಟ್ ಮಾಡುವಂತೆ ಆದೇಶ ಮಾಡಿದ್ದೇವೆ ಎಂದು ಹೇಳಿದರು.

ಉಸಿರಾಟದ ತೊಂದರೆ, ಇತರ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಕಡ್ಡಾಯವಾಗಿ ಟೆಸ್ಟಿಂಗ್ ಮಾಡಲಾಗುತ್ತದೆ. ಆಗ ತಿಳಿಯುತ್ತದೆ ಕೋವಿಡ್ ದಿನಕ್ಕೆ ಹೆಚ್ಚು ಇದೆಯೇ ಅಥವಾ ಕಡಿಮೆ ಇದೆಯೇ ಎಂದು. ಆಗ ಏನು ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ. ಈಗ ಆ ಹಂತದಲ್ಲಿ ಇದೆ. ಗಡಿ ಭಾಗದಲ್ಲಿ ಟೆಸ್ಟಿಂಗ್ ಹೆಚ್ಚು ಮಾಡುತ್ತೇವೆ. ಯಾರ ಯಾರ ಮೇಲೆ ಸಂಶಯ ಇದೆ ಅವರೆಲ್ಲರಿಗೂ ಟೆಸ್ಟ್ ಮಾಡಿಸುತ್ತೇವೆ ಎಂದು ತಿಳಿಸಿದರು.

ಇನ್ನೂ ದೇಶದಲ್ಲಿ ಕೊರೋನಾ ಹೆಸರು ಕೇಳಿದ್ರೆ ಸಾಕು ಜನ ಬೆಚ್ಚಿಬೀಳ್ತಾರೆ. ಯಾಕೆಂದ್ರೆ ಅಲೆಗಳ ಮೇಲೆ ಅಲೆಗಳಾಗಿ ಬಂದು ಜನರನ್ನ  ಹಿಂಡಿ ಹಿಪ್ಪೆ ಮಾಡಿದೆ. ಕಳೆದ ಎರಡು ವರ್ಷದಿಂದ ಮರೆಯಾಗಿದ್ದ ಡೆಡ್ಲಿ ಕ್ರೂರಿ ಮತ್ತೆ  ವಕ್ಕರಿಸಿದೆ.ಕಳೆದ ಕೆಲ ದಿನದಿಂದ ಕೇರಳ ತಮಿಳುನಾಡು ಸೇರಿ ಹಲವೆಡೆ ಕೊರೊನಾ ಕೇಸ್ ಗಳ ಸಂಖ್ಯೆ ಉಲ್ಬಣಗೊಂಡಿದೆ.ಅಮೆರಿಕ, ಬ್ರಿಟನ್, ಚೀನಾ, ಫ್ರಾನ್ಸ್ ದೇಶಗಳಲ್ಲಿ ಕಂಡುಬಂದಿದ್ದ ಕೊರೊನಾದ ಹೊಸ ಸಬ್ ವೇರಿಯಂಟ್ ಜೆಎನ್-1 ಇದೀಗ ಭಾರತದಲ್ಲೂ ಪತ್ತೆಯಾಗಿದ್ದು, ದೇಶದೆಲ್ಲೆಡೆ ಆತಂಕ ಮನೆ ಮಾಡಿದೆ.

Loading

Leave a Reply

Your email address will not be published. Required fields are marked *