Bairati Suresh: ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಸಚಿವ ಬೈರತಿ ಸುರೇಶ್

ಬೆಂಗಳೂರು: ಇಂದು ಮನೋರಾಯನಪಾಳ್ಯ ವಾರ್ಡ್ ನ ಚಾಮುಂಡಿನಗರಕ್ಕೇ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು, ಕ್ಷೇತ್ರದ ಶಾಸಕರಾದ ಬೈರತಿ ಸುರೇಶ್ ರವರು ಭೇಟಿ ನೀಡಿದರು. ಈ ವೇಳೆ ಚಾಮುಂಡಿನಗರದಲ್ಲಿ ಒಳಚರಂಡಿ ಪೈಪ್ ಲೈನ್ ಹಾಗೂ ರಹಮತ್ ನಗರದಲ್ಲಿ ಬೋರ್ ವೆಲ್ ಕೊರೆಯುವ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.

ನಂತರ ಸ್ಥಳಿಯರ ಅಹವಾಲು ಸ್ವೀಕರಿಸಿ ಪರಿಹಾರ ಒದಗಿಸಿಕೊಡುವುದಾಗಿ ಭರವಸೆ ನೀಡಿದರು. ಇನ್ನೂ ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ವಿರೋಧ ಪಕ್ಷದ ನಾಯಕರಾದ ಶ್ರೀ ಅಬ್ದುಲ್ ವಾಜೀದ್ ರವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು, ಪಕ್ಷದ ಮುಖಂಡರು, BWSSB, BBMP ಇಲಾಖೆ ಅಧಿಕಾರಿಗಳು, ಕಾರ್ಯಕರ್ತರು, ಸ್ಥಳೀಯ ನಿವಾಸಿಗಳು ಹಾಜರಿದ್ದರು.

Loading

Leave a Reply

Your email address will not be published. Required fields are marked *