ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆ ಬಗೆಹರಿಸಲು ಸಚಿವೆ ಹೆಬ್ಬಾಳ್ಕರ್ ಸೂಚನೆ

ಬೆಂಗಳೂರು;- ಸಚಿವೆ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಇಂದು ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ತಿಳಿಸಿದರು.

ಇಲಾಖೆಯ ಉಪ ನಿದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇ-ಗವರ್ನೆನ್ಸ್‌ ಇಲಾಖೆಯ ಸಹಕಾರದೊಂದಿಗೆ ಆಗಿರುವ ಕೆಲವೊಂದು ತಾಂತ್ರಿಕ ನೂನ್ಯತೆಗಳನ್ನು ಸರಿಪಡಿಸಬೇಕು. ಅಂಗನವಾಡಿ ಕಾರ್ಯಕರ್ತೆಯರ ಸಹಕಾರದೊಂದಿಗೆ ಮನೆ ಮನೆಗೆ ತೆರಳಿ ನೋಂದಣಿಯಲ್ಲಿ ಆಗಿರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅಧಿಕಾರಿಗಳಿಗೆ ಸೂಚಿಸಿದರು.

Loading

Leave a Reply

Your email address will not be published. Required fields are marked *