ಗೃಹಲಕ್ಷ್ಮೀ ಯೋಜನೆ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಗೊಂದಲದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಭಾಳ್ಕರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲ ಎಂದು ಕೆಲವೆಡೆ ಅಪಸ್ವರ ಕೇಳಿಬಂದಿತ್ತು. ಈ ಬಗ್ಗೆ ಲಕ್ಷ್ಮೀ ಹೆಬ್ಭಾಳ್ಕರ್ ಮಾಧ್ಯಮ ಪ್ರಕಟಣೆ ಹೊರಡಿಸಿ ಗೊಂದಲಗಳಿಗೆ ತೆರೆಎಳೆದಿದ್ದಾರೆ. ಆಗಸ್ಟ್ ತಿಂಗಳಲ್ಲಿ ಯೋಜನೆಗೆ 1.08 ಕೋಟಿ ಅರ್ಜಿ ಸಲ್ಲಿಕೆಯಾಗಿತ್ತು.

1.08 ಕೋಟಿ ಅರ್ಜಿದಾರರಿಗೆ 2,169 ಕೋಟಿ ಹಣ ಬಿಡುಗಡೆಯಾಗಿದೆ. 1.8 ಕೋಟಿ ಅರ್ಜಿದಾರರಲ್ಲಿ 93 ಲಕ್ಷ ಫಲಾನುಭವಿಗಳಿಗೆ ಹಣ ಜಮೆ ಆಗಿದೆ. 5.5 ಲಕ್ಷ ಅರ್ಜಿದಾರರಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಚಾಲ್ತಿಯಲ್ಲಿದೆ. ಈವರೆಗೆ 9.44 ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲ.

3082 ಅರ್ಜಿದಾರರು ಮರಣ ಹೊಂದಿದ್ದು ಅನರ್ಹಗೊಳಿಸಲಾಗಿದೆ. 1 ಲಕ್ಷದ 59 ಸಾವಿರ ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. 5 ಲಕ್ಷ 96 ಸಾವಿರ ಅರ್ಜಿದಾರರ ಬ್ಯಾಂಕ್ ಆಧಾರ್ ಜೋಡಣೆಯಾಗಿಲ್ಲ. 1 ಲಕ್ಷದ 75 ಅರ್ಜಿದಾರರ ಹೆಸರು ಮತ್ತು ವಿಳಾಸದಲ್ಲಿ ವ್ಯತ್ಯಾಸ ಇದೆ ಎಂದು ಮಾಹಿತಿ ನೀಡಿದ್ದಾರೆ.

Loading

Leave a Reply

Your email address will not be published. Required fields are marked *