ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ: ಬೇಳೂರು ಗೋಪಾಲಕೃಷ್ಣ

ಬೆಂಗಳೂರು: ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ. ಅಧಿಕಾರದ ಪಿತ್ತ ನೆತ್ತಿಗೇರಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಮಧು ಬಂಗಾರಪ್ಪ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಉಸ್ತುವಾರಿ ಸಚಿವರು ಸರಿ ಆಗಿದ್ದಾರೆ.

ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ. ನಾವು ಶಾಸಕರಲ್ವಾ? ನಮಗೂ ಜವಾಬ್ದಾರಿ ಇಲ್ವಾ? ನಾವೂ ಯಡಿಯೂರಪ್ಪನ ಮಕ್ಕಳನ್ನು ಸೋಲಿಸಬೇಕು ಅಂತಾ ಇದ್ದೇವೆ. ರಾಘವೇಂದ್ರನ ಸೋಲಿಸಬೇಕು ಎಂದು ಇದ್ದೇವೆ. ಆದರೆ ನಮ್ಮ ಸಚಿವರು ನಮ್ಮಲ್ಲೇ ಒಡಕು ಮೂಡಿಸುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ಮಧು ಬಂಗಾರಪ್ಪ ಮಾಜಿ ಮುಖ್ಯಮಂತ್ರಿ ಮಗ. ಅವರ ತಂದೆ ಗರಡಿಯಲ್ಲಿ ಪಳಗಿದವರು ನಾವು. ಎಲ್ಲರನ್ನೂ ಒಗ್ಗೂಡಿಸಿ ಕರೆದುಕೊಂಡು ಹೋಗಬೇಕು. ಅವರೇ ಪಕ್ಷವನ್ನು ಒಡೆಯುವುದಲ್ಲ. ಶಿವಮೊಗ್ಗದಲ್ಲಿ (Shivamogga) ಪಕ್ಷ ಒಡೆದು ಎರಡು ಬಣವಾಗಿದೆ. ಅವರೇ ಅದಕ್ಕೆ ಕುಮ್ಮಕ್ಕು ನೀಡುವುದಲ್ಲ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಒಬ್ಬ ಪ್ರಬಲ ಆಕಾಂಕ್ಷಿ ಎಂದರು.

Loading

Leave a Reply

Your email address will not be published. Required fields are marked *