ಬೆಂಗಳೂರು: ಚಾಲಕರ ಪುನಶ್ಚೇತನಕ್ಕೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಚಾಲಕರಿಗೆ ವಸತಿ ಯೋಜನೆ ನೀಡಲು ವಸತಿ ಇಲಾಖೆಗೆ ಪತ್ರ ಬರೆದಿದ್ದೇನೆ. ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ 4 ಕೋಟಿ 7 ಲಕ್ಷ ರೂ. ಕೊಡಲಾಗಿತ್ತು. ಈ ಬಾರಿ 17 ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದರು. ಶಾಂತಿನಗರದ ಬಿಎಂಟಿಸಿ (BMTC) ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯ ಸಾರಿಗೆ ಇಲಾಖೆಯಿಂದ ಇನ್ನೂ ಎರಡ್ಮೂರು ತಿಂಗಳಲ್ಲಿ ಅಗ್ರಿಗೇಟರ್ ಆ್ಯಪ್ ಬಿಡುಗಡೆ ಮಾಡುತ್ತೇವೆ. ಚಾಲಕರಿಗೆ 10 ಸಾವಿರ ಮಾಸಿಕ ಪರಿಹಾರ ಕೇಳಿದ್ದಾರೆ. ಅದನ್ನು ನೀಡಲು 4370.28 ಕೋಟಿ ಬೇಕಾಗುತ್ತೆ ಎಂದು ತಿಳಿಸಿದರು.
ಇನ್ನು ಸಾರಿಗೆ ಅಭಿವೃದ್ದಿ ನಿಗಮ ಸ್ಥಾಪನೆಗೆ ಕೋರಿದ್ದಾರೆ.
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಮಾಡಲಾಗುತ್ತೆ. ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಜೊತೆ ಮಾತನಾಡಲಾಗಿದೆ. ಇ-ಆಟೋಗಳಿಗೆ ರಹದಾರಿ ಕುರಿತು ಪತ್ರ ಬರೆಯಲಾಗಿದೆ. ಜೀವಾವಧಿ ಟ್ಯಾಕ್ಸ್ ಅನ್ನು ಲೈಫ್ ಟ್ಯಾಕ್ಸ್ ಬೇಡ, ಮೊದಲಿನಂತೆ ಮಾಡುವಂತೆ ಕೋರಿದ್ದಾರೆ. ಮುಖ್ಯಮಂತ್ರಿಗಳ ಗಮನಕ್ಕೆ ತಂದಿದಿದೇನೆ ಎಂದು ಹೇಳಿದರು.
ಖಾಸಗಿ ಬಸ್ಗಳಿಗೂ ಶಕ್ತಿ ಯೋಜನೆ ವಿಸ್ತರಣೆ ಕೋರಿಕೆ ಇಟ್ಟಿದ್ದಾರೆ. ಹಣಕಾಸಿನ ವಿಚಾರ ಆಗಿರುವುದರಿಂದ ಮುಖ್ಯಮಂತ್ರಿಗಳು ನಿರ್ಧಾರ ಮಾಡುತ್ತಾರೆ. ತೆರಿಗೆ ವಿನಾಯಿತಿ ಕೇಳಿದ್ದಾರೆ. ನಾವು ಕೊಟ್ಟರೆ ಬೇರೆ ರಾಜ್ಯದಲ್ಲೂ ನೀಡಬೇಕು. ಮುಂದೆ ನೋಡೋಣ. ಶಕ್ತಿ ಯೋಜನೆಗೆ ಖಾಸಗಿ ವಾಹನಗಳ ಬಳಕೆ ಮುಂದಿನ ದಿನಗಳಲ್ಲಿ ನಿರ್ಧಾರ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.