ಬೆಂಗಳೂರು : ಕರ್ನಾಟಕ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಳಗೊಂಡು 34 ಮಂದಿಗೆ ನಾನಾ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಣಕಾಸು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಬೃಹತ್ ಮತ್ತು ಮಧ್ಯಮ ನೀರಾವರಿ, ಬೆಂಗಳೂರು ನಗರ ಅಭಿವೃದ್ಧಿ, ಎಚ್.ಕೆ.ಪಾಟೀಲ್ ಅವರಿಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಶಾಸನ, ಪ್ರವಾಸೋದ್ಯಮ, ದಿನೇಶ್ ಗುಂಡೂರಾವ್ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕೃಷ್ಣ ಬೈರೇಗೌಡ ಅವರಿಗೆ ಕಂದಾಯ ಖಾತೆ ನೀಡಲಾಗಿದೆ.