ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಚಿತ್ರದಲ್ಲಿ ವಿಲನ್ ಆಗಿ ಅಬ್ಬರಿಸಿದ್ದ ನಟ ವಿನಾಯಕನ್ ಬಂಧನವಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಗಲಾಟೆ ಮಾಡಿದ ಆರೋಪದ ಮೇಲೆ ನಟ ವಿನಾಯಕನ್ ಅವರನ್ನು ಎರ್ನಾಕುಲಂ ನಗರ ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಕುಡಿದು ಬಂದು ಪೊಲೀಸ್ ಠಾಣೆಯಲ್ಲಿ ಗಲಾಟೆ ಮಾಡಿದ್ದ ಕಾರಣಕ್ಕೆ ನಟ ವಿನಾಯಕನ್ ಬಂಧನವಾಗಿದೆ. ತಾನು ಉಳಿದುಕೊಂಡಿದ್ದ ಅಪಾರ್ಟ್‌ಮೆಂಟ್‌ನಲ್ಲಿ ವಿನಾಯಕನ್ ಜೋರು ಶಬ್ಧ ಮಾಡಿ ತೊಂದರೆ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ನಟನನ್ನು ಠಾಣೆಗೆ ಹಾಜರಾಗುವಂತೆ ಹೇಳಿದ್ದರು.
ಆದರೆ ಕುಡಿದು ಠಾಣೆಗೆ ಬಂದ ನಟ ಮತ್ತೆ ಗಲಾಟೆ ಮಾಡಿದ್ದಾರೆ ಎನ್ನಲಾಗ್ತಿದೆ. ನಟ ನಟನನ್ನು ವೈದ್ಯಕೀಯ ಪರೀಕ್ಷೆಗಾಗಿ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ನಟನನ್ನು ಬಂಧಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ. ಸದ್ಯ ವಿನಾಯಕನ್ ಬಂಧನ ವಿಚಾರ ಕೇರಳದಲ್ಲಿ ಸದ್ದು ಮಾಡ್ತಿದೆ. ಪೊಲೀಸರು ನಟನ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದು ಮುಂದೆ ಏನಾಗುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ. ‘ಜೈಲರ್’ ಚಿತ್ರದ ವರ್ಮನ್ ಪಾತ್ರದಲ್ಲಿ ವಿನಾಯಕನ್ ಗಮನ ಸೆಳೆದಿದ್ದರು.