ಬೆಂಗಳೂರು: ಜೆ.ಪಿ.ನಗರದಲ್ಲಿರುವ ಮಾಜಿ ಸಿಎಂ H.D.ಕುಮಾರಸ್ವಾಮಿ ನಿವಾಸಕ್ಕೆ ಶಾಸಕ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಹೆಚ್ಡಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು. ಕೆಲ ದಿನಗಳ ಹಿಂದಷ್ಟೇ ತೀವ್ರ ಜ್ವರ ಹಿನ್ನೆಲೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ವಾಪಸ್ ಮನೆಗೆ ಆಗಮಿಸಿದ್ದರು.ಡಾಕ್ಟರ್ ಪಿ. ಸತೀಶ್ ಚಂದ್ರ ನೇತೃತ್ವದಲ್ಲಿ ಟ್ರೀಟ್ಮೆಂಟ್ ನೀಡಲಾಗಿದ್ದು. ಸದ್ಯ ಕುಮಾರಸ್ವಾಮಿ ಚೇತರಿಸಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅಪೋಲೋ ಆಸ್ಪತ್ರೆ ವೈದ್ಯರಿಗೆ ಕರೆ ಮಾಡಿ ಕುಮಾರಸ್ವಾಮಿ ಆರೋಗ್ಯದ ಮಾಹಿತಿ ವಿಚಾರಿಸಿದ್ರು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಕುಮಾರಸ್ವಾಮಿ ಆರೋಗ್ಯದ ಮಾಹಿತಿ ಪಡೆದಿದ್ದರು.