ಬೆಂಗಳೂರು ;- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಮಲೆನಾಡಿನ ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತುಂತುರ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾದರೆ, ಉಳಿದ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಮಳೆಯ ಸಿಂಚನವಾಗಲಿದೆ. ಇನ್ನುಳಿದ ಪ್ರದೇಶಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನ ಕೆಲವು ಕಡೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಸೂರ್ಯನ ದರ್ಶನವಾದರೆ, ಮತ್ತೆ ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ.