ಕಾರವಾರ: ಪೋಷಕರ ನಿರ್ಲಕ್ಷ್ಯದಿಂದಾಗಿ ಮೊಬೈಲ್ ಚಾರ್ಜರ್ನಿಂದ ಶಾಕ್ ಹೊಡೆದು 8 ತಿಂಗಳ ಮಗು ಸಾವನ್ನಪ್ಪಿರುವ ಮನಕಲಕುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಿದ್ದರದಲ್ಲಿ ನಡೆದಿದೆ. ಸಂತೋಷ್ ಕಲ್ಗುಟ್ಕರ್ ಹಾಗೂ ಸಂಜನಾ ಎಂಬವರ 8 ತಿಂಗಳ ಮಗು ಸಾನಿಧ್ಯ ವಿದ್ಯುತ್ ಶಾಕ್ಗೆ ಬಲಿಯಾದ ಕಂದಮ್ಮ. ಮೊಬೈಲ್ ಚಾರ್ಜ್ ಮಾಡಿದ ಬಳಿಕ ಪೋಷಕರು ಪ್ಲಗ್ಅನ್ನು ಆಫ್ ಮಾಡದೇ ನಿರ್ಲಕ್ಷ್ಯವಹಿಸಿದ್ದರು. ಮಗು ಆಟವಾಡುತ್ತಾ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿಕೊಂಡಿತ್ತು. ಇದರಿಂದಾಗಿ ಶಾಕ್ ಹೊಡೆದು ಮಗು ಸಾವನ್ನಪ್ಪಿದೆ. ಘಟನೆ ಸಂಬಂಧ ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.