ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆಯಲು ಆರಂಭವಾಗಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ಇಂದು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ.
ಅಲ್ಲದೇ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಇಂದೇ ರಾಜಿನಾಮೆ ನೀಡುತ್ತಾರೆ ಎಂದು ಹೇಳಲಾಗುತ್ತಿದೆ. ಹೈಕಮಾಂಡ್ ಜೊತೆ ಚರ್ಚಿಸಲು ಶೆಟ್ಟರ್ ಈಗಾಗಲೇ ದೆಹಲಿ ಬಿಜೆಪಿ ಕಚೇರಿಗೆ ತೆರಳಿದ್ದು, ಕೆಲವೇ ಕ್ಷಣಗಳಲ್ಲಿ ಶೆಟ್ಟರ್ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ. ಲೋಕಸಭಾ ಚುನಾವಣೆಗೆ ಟಿಕೆಟ್ ನೀಡುವಂತೆ ಶೆಟ್ಟರ್ ಅಮಿತ್ ಶಾ ಮುಂದೆ ಬೇಡಿಕೆ ಇಟ್ಟಿದ್ದಾರೆ. ಅಧಿಕೃತವಾಗಿ ಬಿಜೆಪಿಗೆ ಶೆಟ್ಟರ್ ಮರುಸೇರ್ಪಡೆಯಾಗಿದ್ದು, ಕಾಂಗ್ರೆಸ್‌ಗೆ ಗುಡ್ʼಬೈ ಹೇಳಿದ್ದಾರೆ.