ಮೈಸೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿರುವುದಕ್ಕೆ ಬಿಜೆಪಿ ಕಾರ್ಯಕರ್ತರಿಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಕ್ಷಮೆಯಾಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸಂಸದ ಪ್ರತಾಪ್ ಸಿಂಹ, ನಮ್ಮ ಪರವಾಗಿ ಮತ ಕೇಳುವ, ಬ್ಯಾನರ್ ಬಂಟಿಂಗ್ ಕಟ್ಟುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ ಹಾಗು ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕೂ ಇರುತ್ತದೆ.
ಪಕ್ಷ ಸೋತು ಅನಾಥವಾಗಿರುವುದು, ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ. ಹಾಗೂ ಯಾರದ್ದೋ ವೈಯ್ಯಕ್ತಿಕ ಮಹತ್ವಾಕಾಂಕ್ಷೆಯಿಂದ ಸೃಷ್ಟಿಯಾಗುವ ಷಡ್ಯಂತ್ರಕ್ಕೆ ಬಲಿಯಾಗುವುದು, ಯಾರ್ಯಾರನ್ನೋ ತೆಗಳುವುದು ಬೇಡ ಕಾರ್ಯಕರ್ತರೇ ಎಂದು ಕಾರ್ಯಕರ್ತರಲ್ಲಿ ಕ್ಷಮೆ ಕೇಳಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಬಿಜೆಪಿ ಕೇವಲ 66 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ.