ಹಾಸನ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೂ ಮುಸ್ಲಿಮರಿಗೆ ರಕ್ಷಣೆ ಇಲ್ಲ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹಾಸನ ಆರ್ಟ್ಸ್ ಕಾಲೇಜಿನಲ್ಲಿ ಮುಸ್ಲಿಮರು ಎಂಬ ಕಾರಣಕ್ಕಾಗಿ ಪ್ರಾಂಶುಪಾಲ ಹುದ್ದೆ ಕೊಟ್ಟಿಲ್ಲ ಎಂದು ಆರೋಪಿಸಿದರು. ಮುಸ್ಲಿಂ ವ್ಯಕ್ತಿಗೆ ಹುದ್ದೆ ಪಡೆಯುವ ಹಿರಿತನ ಇದ್ದರೂ ಅವರಿಗೆ ಹುದ್ದೆ ಕೊಟ್ಟಿಲ್ಲ. ಬದಲಾಗಿ, ಜೂನಿಯರ್ ವ್ಯಕ್ತಿಗೆ ಹುದ್ದೆ ನೀಡಲಾಗಿದೆ. ಇನ್ನೂ ಸಾಬ್ರಿಗೆ ರಕ್ಷಣೆ ಇಲ್ಲ ಎಂದರು.
ಈ ಸರ್ಕಾರದ ಬಂದ ಮೇಲೂ ರಕ್ಷಣೆ ಇಲ್ಲ.ಈಗಲಾದರೂ ಸಾಬ್ರಿಗೆ ರಕ್ಷಣೆ ಕೊಡಿ. ಈ ಸಮಸ್ಯೆಯನ್ನು ಸರಿಪಡಿಸಿ ಎಂದು ಎಚ್ ಡಿ ರೇವಣ್ಣ ಆಗ್ರಹಿಸಿದರು. ಸಾಬ್ರು ಇಷ್ಟೆಲ್ಲ ನಿಮಗೆ ವೋಟ್ ಹಾಕಿದ್ದಾರೆ. ಆ ವ್ಯಕ್ತಿ ಹುದ್ದೆಗೆ ಅರ್ಹರಾದವರು. ಈ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಸಚಿವರಿಗೆ ಈ ತಪ್ಪು ಸರಿಪಡಿಸಲು ಸೂಚನೆ ನೀಡಬೇಕು ಎಂದು ರೇವಣ್ಣ ಮನವಿ ಮಾಡಿದರು.