ದುರುಪಯೋಗಕ್ಕೆ ಅಥವಾ ವಂಚನೆಗೆ ನನ್ನ ಒಳ್ಳೆಯತನ ಒಂದು ಸಾಧನ ಅಲ್ಲ: ಕಿಚ್ಚ ಸುದೀಪ್

ವಿವಾದಗಳಿಂದ ಸದಾ ದೂರವಿರುವ ನಟ ಕಿಚ್ಚ ಸುದೀಪ್ ಗೆ ಆಗಾಗ ಅನಗತ್ಯವಾದ ಕಿರಿಕ್ ಗಳು ಎದುರಾಗುತ್ತಿರುತ್ತವೆ. ಸೋಶಿಯಲ್ ಮೀಡಿಯಾದಲ್ಲೂ ಅನವಶ್ಯಕವಾಗಿ ಯಾರ ಬಗ್ಗೆಯೂ ಕಮೆಂಟ್ ಮಾಡದ ಸುದೀಪ್ ಇದೀಗ ತನ್ನ ಒಳ್ಳೆಯತನವನ್ನು ದುರುಪಯೋಗ ಪಡಿಸಿಕೊಳ್ಳಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸದ್ಯ ಸುದೀಪ್ ಮಾಡಿರುವ ಎಚ್ಚರಿಕೆಯ ಟ್ವೀಟ್ ಯಾರಿಗೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಸುದೀಪ್ ಬರೆದಿರುವ ಸಾಲುಗಳಲ್ಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
‘ಈ ಸಾಲನ್ನು ಓದಿ. ಇದು ತುಂಬ ಚೆನ್ನಾಗಿದೆ’ ಎಂಬ ಕ್ಯಾಪ್ಷನ್ ಜೊತೆಯಲ್ಲಿ ಸುದೀಪ್ ಅವರು ಟ್ವೀಟ್ ಮಾಡಿದ್ದಾರೆ. ‘ಇದು ತಿಳಿದಿರಲಿ: ದುರುಪಯೋಗಕ್ಕೆ ಅಥವಾ ವಂಚನೆಗೆ ನನ್ನ ಒಳ್ಳೆಯತನ ಒಂದು ಸಾಧನ ಅಲ್ಲ. ಸತ್ಯವಾಗಿದ್ದಾಗ ಅದು ಪ್ರಜ್ವಲಿಸುತ್ತದೆ. ದುರಹಂಕಾರದಿಂದ ಅದರ ಕಾಂತಿ ಕಳೆಗುಂದಲು ನಾನು ಬಿಡುವುದಿಲ್ಲ. ವಿನಯದಿಂದಿರಿ, ಸತ್ಯವಂತರಾಗಿರಿ’ ಎಂಬ ಸಾಲನ್ನು ಸುದೀಪ್ ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
‘ರಾಜಿಯಾಗದ ಒಳ್ಳೆಯತನ’ ಎಂದು ಸುದೀಪ್ ಅವರು ಹ್ಯಾಶ್ ಟ್ಯಾಗ್ ಬಳಸಿದ್ದಾರೆ. ಅದರ ಜೊತೆ #k46 ಹ್ಯಾಶ್ ಟ್ಯಾಗ್ ಕೂಡ ಇದೆ. ಹಾಗಾಗಿ ಇದು ಸಿನಿಮಾಗೆ ಸಂಬಂಧಿಸಿದಂತೆ ಹೇಳಿದ್ದೋ ಅಥವಾ ಯಾವುದಾದರೂ ವ್ಯಕ್ತಿಗೆ ಸಂಬಂಧಿಸಿ ಹೇಳಿದ್ದೋ ಎಂಬ ಪ್ರಶ್ನೆ ಶುರುವಾಗಿದೆ. ತಮ್ಮ 46ನೇ ಸಿನಿಮಾದ ಟೀಸರ್ ಬಿಡುಗಡೆಯಾದ ಬೆನ್ನಲ್ಲೇ ಅವರು ಈ ರೀತಿ ಟ್ವೀಟ್ ಮಾಡಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.
ಇತ್ತೀಚೆಗೆ ನಿರ್ಮಾಪಕ ಎನ್. ಕುಮಾರ್ ಅವರು ಸುದೀಪ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದೀಪ್ ಅಡ್ವಾನ್ಸ್ ಪಡೆದುಕೊಂಡು ಅನೇಕ ವರ್ಷಗಳು ಕಳೆದಿದ್ದರೂ ಕಾಲ್ಶೀಟ್ ನೀಡುತ್ತಿಲ್ಲ ಎಂದು ದೂರು ನೀಡಿದ್ದಾರೆ. ಇದಕ್ಕೆ ಸುದೀಪ್ ಅವರು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಟ್ವಿಟರ್ನಲ್ಲಿ ಅವರು ಈ ರೀತಿ ಪೋಸ್ಟ್ ಮಾಡಿರುವುದು ಅಚ್ಚರಿ ಮೂಡಿಸಿದೆ.

Loading

Leave a Reply

Your email address will not be published. Required fields are marked *