ಮಿಜೋರಾಂ: ಮ್ಯಾನ್ಮಾರ್ ಸೈನಿಕರನ್ನು ಕರೆದೊಯ್ಯಲು ಬಂದಿದ್ದ ಮಿಲಿಟರಿ ವಿಮಾನವು (Myanmar military plane) ಮಿಜೋರಾಂನ ಲೆಂಗ್ಪುಯಿ ಏರ್ಪೋರ್ಟ್ನಲ್ಲಿ ರನ್ವೇಯಿಂದ ಸ್ಕಿಡ್ ಆಗಿದೆ. ಘಟನೆಯಲ್ಲಿ ಕನಿಷ್ಠ ಆರು ಜನರು ಗಾಯಗೊಂಡಿದ್ದಾರೆ.
ಮಂಗಳವಾರ ಮಿಜೋರಾಂನ (Mizoram) ಲೆಂಗ್ಪುಯಿ ವಿಮಾನ ನಿಲ್ದಾಣದ ಟರ್ಮಿನಲ್ ತಲುಪುವ ಮೊದಲು ಅಂದರೆ ಬೆಳಗ್ಗೆ 10.19 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಘಟನೆ ನಡೆದ ವೇಳೆ ವಿಮಾನದಲ್ಲಿ ಒಟ್ಟು 14 ಮಂದಿ ಇದ್ದರು ಎನ್ನಲಾಗಿದೆ.
ಈ ಸಂಬಂಧ ಮಿಜೋರಾಂ ಡಿಜಿಪಿ ಅನಿಲ್ ಶುಕ್ಲಾ ಪ್ರತಿಕ್ರಿಯಿಸಿ, ಲ್ಯಾಂಡಿಂಗ್ ವೇಳೆ ಉಂಟಾದ ತಾಂತ್ರಿಕ ದೋಷದಿಂದಾಗಿ ವಿಮಾನ ಪತನಗೊಂಡಿದೆ. ಈ ವಿಮಾನದಲ್ಲಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು. ಇದರಲ್ಲಿ 6 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಉಳಿದ 8 ಮಂದಿ ಸುರಕ್ಷಿತವಾಗಿದ್ದಾರೆ. ಇವರನ್ನು ಲೆಂಗಪುಯಿನಲ್ಲಿರುವ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.