ಉಡುಪಿ: ಉಡುಪಿ ಸಂತೆಕಟ್ಟೆಯ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಕಾಮಗಾರಿಯ ಮಣ್ಣು ಕುಸಿದು ಸರ್ವೇ ರಸ್ತೆ ಹಾಗೂ ತಡೆಗೋಡೆಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಅವಜ್ಞಾನಿಕ ಕಾಮಗಾರಿಯಿಂದಾಗಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈ ಮಣ್ಣು ಕುಸಿದಿದ್ದು ಇಲ್ಲಿ ನೂರಾರು ಕುಟುಂಬಗಳು ಸಂಪರ್ಕ ಕಡಿತದ ಭೀತಿ ಎದುರಿಸುತ್ತಿದೆ. ಅಧಿಕಾರಿಗಳು ಹಾಗೂ ಸಂಸದರ ನಿರ್ಲಕ್ಷದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ಕೂಡಲೇ ಇದಕ್ಕೆ ಪರಿಹಾರ ಕಂಡುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರಿಂಗ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.