ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆಸಿಎನ್ ಗೌಡ್ರು ಅವರ ಕುಟುಂಬದ ಕೆಸಿಎನ್ ಮೋಹನ್ ಅವರು ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೋಹನ್ ವಿಧಿವಶರಾಗಿದ್ದಾರೆ.
ಕೆಸಿಎನ್ ಮೋಹನ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದೆ. ಪ್ರದರ್ಶಕರಾಗಿ, ನಿರ್ಮಾಪಕರಾಗಿ, ವಿತರಕರಾಗಿ ಮೋಹನ್ ಸ್ಯಾಂಡಲ್‌ವುಡ್‌ನಲ್ಲಿ ಹೆಸರು ಮಾಡಿದ್ದರು. ಬೆಂಗಳೂರಿನ ನವರಂಗ್ ಚಿತ್ರಮಂದಿರದ ಮಾಲೀಕರಾಗಿದ್ದ ಮೋಹನ್, ಈಚೆಗೆ ಅದನ್ನು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನವೀಕರಣ ಮಾಡಿದ್ದರು.