ನಾಡಪ್ರಭು ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ನಟ ಚೇತನ್ ಮೇಲೆ NCR ದಾಖಲು

ಬೆಂಗಳೂರು:- ಸೋಶಿಯಲ್ ಮೀಡಿಯಾದಲ್ಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡರಿಗೆ ಅಪಮಾನವಾಗುವ ರೀತಿಯಲ್ಲಿ ಹೇಳಿಕೆಯೊಂದನ್ನು ನೀಡಿದ್ದ ನಟ ಚೇತನ್ ಕುಮಾರ್ ವಿರುದ್ಧ ಎನ್​ಸಿಆರ್​ ದಾಖಲಾಗಿದೆ.

ನಾಡಪ್ರಭು ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ ಎಂದು ವಕೀಲ ಆರ್ ಎಲ್ ಎನ್ ಮೂರ್ತಿ ಅವರು ಶೇಷಾದ್ರಿಪುರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಪಡೆದು ಎನ್ ಸಿಆರ್ ದಾಖಲಿಸಿಕೊಂಡಿದ್ದಾರೆ ಪೊಲೀಸರು.

ಇನ್ನೂ ಸಾಮಾಜಿಕ ಆಗುಹೋಗುಗಳ ಬಗ್ಗೆ ವಿಭಿನ್ನ ರೀತಿಯಲ್ಲಿ ಪೋಸ್ಟ್​ ಹಾಕುವ ಚೇತನ್​ ಅವರ ಹೇಳಿಕೆಗಳು ಪ್ರತಿ ಬಾರಿಯೂ ವಿವಾದಕ್ಕೆ ಕಾರಣವಾಗುತ್ತವೆ. ಅಂತೆಯೇ ಈ ಬಾರಿ ಅವರು ಟಿಪ್ಪು ಸುಲ್ತಾನ್ ಹಾಗೂ ಕೆಂಪೇಗೌಡರ ನಡುವೆ ಹೋಲಿಕೆ ಮಾಡಿ ಟ್ವೀಟ್ ಹಾಕಿದ್ದರು.

Loading

Leave a Reply

Your email address will not be published. Required fields are marked *