ವಿಜಯಪುರ: ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಮಾಡಿದ್ದು ನಮ್ಮ ಸರ್ಕಾರ ಅಲ್ಲ ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಕೆಇಆರ್ಸಿ ವಿದ್ಯುತ್ ದರ ಹೆಚ್ಚಳ ಮಾಡಿದೆ. ನಾವು ಅಧಿಕಾರಕ್ಕೆ ಬರುವ ಮೊದಲೇ ವಿದ್ಯುತ್ ದರ ಹೆಚ್ಚಳ ಆಗಿದೆ. ಬೆಲೆ ಏರಿಕೆಗೂ ನಮಗೂ ಯಾವ ಸಂಬಂಧವಿಲ್ಲ. ಈಗಾಗಲೇ ಮುಖ್ಯಮಂತ್ರಿಗಳು ಹಿಂಪಡೆಯಲು ಆಗಲ್ಲ ಎಂದಿದ್ದಾರೆ. ಆದರೂ ಸಹ ನಾನು ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡುತ್ತೇನೆ. ಕೈಗಾರಿಕೋದ್ಯಮಿಗಳು ಸಹಕರಿಸಿ ಎಂದು ವಿನಂತಿ ಮಾಡುತ್ತೇನೆ. ಸಿಎಂ ಸಿದ್ದರಾಮಯ್ಯ, ಇಂಧನ ಸಚಿವ ಜಾರ್ಜ್ ಜತೆ ಚರ್ಚಿಸುತ್ತೇನೆ ಎಂದರು.