ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದು ಭಾರತದ ಕೀರ್ತಿ ಪತಾಕೆ ಹಾರಿಸಿದ್ದ ಜಾವೆಲಿನ್ ಥ್ರೋ ಸ್ಪರ್ಧಿ ನೀರಜ್ ಚೋಪ್ರಾ (Neeraj Chopra) ಬುಡಾಪೆಸ್ಟ್‌ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.
ಜೊತೆಗೆ 2024ಕ್ಕೆ ಪ್ಯಾರಿಸ್‌ನಲ್ಲಿ ನಡೆಯುವ ಒಲಿಂಪಿಕ್ಸ್ (Paris Olympic 2024) ಟೂರ್ನಿಗೆ ಅರ್ಹತೆ ಪಡೆದುಕೊಂಡಿದ್ದಾರೆ.
ಶುಕ್ರವಾರ ನಡೆದ ಪುರುಷರ ಜಾವೆಲಿನ್ ಥ್ರೋ `ಎ’ ಗುಂಪಿನ ಅರ್ಹತಾ ಸುತ್ತಿನ ಸ್ಪರ್ಧೆಯಲ್ಲಿ 88.77 ಮೀಟರ್ ದೂರದ ಜಾವೆಲಿನ್ ಎಸೆದಿರುವ ನೀರಜ್ ವಿಶ್ವ ಚಾಂಪಿಯನ್‌ಶಿಪ್ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದ್ದಾರೆ. ಈ ಮೂಲಕ 2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹಗೆ ಗಿಟ್ಟಿಸಿಕೊಂಡಿದ್ದಾರೆ.
2021ರ ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ನೀರಜ್ ಸ್ವರ್ಣ ಪದಕ ಜಯಿಸಿದ್ದರು. ಅಂದು ಅವರು 87.58 ಮೀಟರ್ ದೂರ ಜಾವೆಲಿನ್ ಎಸೆದಿದ್ದರು.
ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ನೀರಜ್ ಚೋಪ್ರಾ 85.50 ಮೀಟರ್ ದೂರ ಜಾವೆಲಿನ್ ಎಸೆಯಬೇಕಿತ್ತು. ಆದ್ರೆ ಅರ್ಹತಾ ಸುತ್ತಿನ ಮೊದಲ ಪ್ರಯತ್ನದಲ್ಲೇ ಚೋಪ್ರಾ ಉತ್ತಮ ಪ್ರದರ್ಶನ ನೀಡಿದ್ದಾರೆ. ಈವರೆಗಿನ ಗೇಮ್ಸ್‌ನಲ್ಲಿ 89.94 ಮೀಟರ್ ದೂರ ಜಾವೆಲಿನ್ ಎಸೆದಿರುವುದು ಅವರ ಶ್ರೇಷ್ಠ ಸಾಧನೆಯಾಗಿದೆ.