Asian Games 2023: ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ – ಕಿಶೋರ್ ಜೇನಾ ಬೆಳ್ಳಿ ಪದಕ

ಹಾಂಗ್ ಝೌ: ಏಷ್ಯನ್ ಗೇಮ್ಸ್ 2023ರ (Asian Games 2023) ಜಾವೆಲಿನ್ (Javelin) ಎಸೆತದಲ್ಲಿ ಭಾರತದ ನೀರಜ್ ಚೋಪ್ರಾ (Neeraj Chopra) ಚಿನ್ನ ಮತ್ತು ಕಿಶೋರ್ ಜೇನಾ ಬೆಳ್ಳಿ ಪದಕವನ್ನು ಪಡೆದಿದ್ದಾರೆ. ಈ ಮೂಲಕ ಜಾವೆಲಿನ್ ಸ್ಪರ್ಧೆಯಲ್ಲಿ ಭಾರತೀಯ ಸ್ಪರ್ಧಿಗಳು ಉನ್ನತ ಸಾಧನೆ ಮಾಡಿದ್ದಾರೆ

ನೀರಜ್ ಅವರು, 88.88 ಮೀಟರ್ ದೂರ ಜಾವೆಲಿನ್ ಎಸೆದು ಅಮೋಘ ಸಾಧನೆಗೈದಿದ್ದಾರೆ. ನೀರಜ್‍ಗೆ ತಕ್ಕ ಪೈಪೋಟಿ ನೀಡಿದ ಜೇನಾ 87.54 ಮೀಟರ್ ದೂರ ಜಾವೆಲಿನ್ ಎಸೆದು ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಟೋಕಿಯೊ ಒಲಿಂಪಿಕ್ ಚಿನ್ನದ ಪದಕ ಗೆದ್ದಿದ್ದ ನೀರಜ್, 2018ರ ಏಷ್ಯನ್ ಕ್ರೀಡಾಕೂಟದಲ್ಲೂ ಚಿನ್ನದ ಪದಕ ಗೆದ್ದಿದ್ದರು

 

Loading

Leave a Reply

Your email address will not be published. Required fields are marked *