ಅಥ್ಲೆಟಿಕ್ಸ್ ನಲ್ಲಿ ತಮ್ಮ ಚಿನ್ನದ ಪದಕದ ಬೇಟೆಯನ್ನು ಮುಂದುವರಿಸಿರುವ ಒಲಿಂಪಿಕ್ಸ್ ಪದಕ ವಿಜೇತ ನೀರಜ್ ಚೋಪ್ರಾ, ಹಂಗರಿಯ ಬುಡಾಪೆಸ್ಟ್ ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ನಲ್ಲಿ ಮತ್ತೊಂದು ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ.
ನೀರಜ್ ಚೋಪ್ರಾ ಅವರು ಈ ವರ್ಷದ ಆರಂಭದಿಂದಲೂ ಪ್ರಬಲ ಪೈಪೋಟಿಯನ್ನು ಎದುರಿಸುತ್ತಲೇ ಬಂದಿದ್ದು, ವಿಶ್ವ ಅಥ್ಲೆಟಿಕ್ಸ್ ನ ಫೈನಲ್ಸ್ ನ ಅರ್ಹತಾ ಸುತ್ತಿನಲ್ಲಿ ಒಂದೇ ಎಸೆತದಲ್ಲಿ ಅರ್ಹತಾ ಗುರಿ (88.77 ಮೀಟರ್) ತಲುಪಿದ್ದಲ್ಲದೆ 2024ರಲ್ಲಿ ಪ್ಯಾರಿಸ್ ನಲ್ಲಿ ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಟಿಕೆಟ್ ಗಿಟ್ಟಿಸಿಕೊಂಡಿದ್ದರು
ಫೈನಲ್ ಪಂದ್ಯದಲ್ಲಿ 88.17 ಮೀಟರ್ ದೂರ ಭರ್ಜಿ ಎಸೆಯುವ ಮೂಲಕ ನೀರಜ್ ಚೋಪ್ರಾ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ದಾಖಲೆ ನಿರ್ಮಿಸಿದ್ದಾರೆ.
ಮೊದಲ ಸುತ್ತಿನಲ್ಲೇ ಫೌಲ್ ಮಾಡಿದ್ದ ನೀರಜ್ (Neeraj Chopra), 2ನೇ ಸುತ್ತಿನಲ್ಲಿ 88.17 ಮೀಟರ್ ದೂರಕ್ಕೆ ಎಸೆಯುವ ಮೂಲಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು. ಪಾಕಿಸ್ತಾನದ ಅರ್ಷದ್ ನದೀಮ್ ಅವರು 87.82 ಮೀಟರ್ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದಿದ್ದಾರೆ.