ಬೆಂಗಳೂರು : ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಸಿಎಂ, ಡಿಸಿಎಂ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಅಂದೇ ಸಿಇಟಿ ಪರೀಕ್ಷೆ ಕೂಡ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಟ್ರಾಫಿಕ್ ಬಿಸಿ ತಟ್ಟುವ ಸಾಧ್ಯತೆಯಿದೆ.
ಈ ಹಿನ್ನೆಲೆ ಕೆಇಎ ( ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಬೆಂಗಳೂರು ನಗರ ಸಂಚಾರ ಪೊಲೀಸರ ಮೊರೆ ಹೋಗಿದ್ದು, ಇದಕ್ಕೆ ಏನಾದರೂ ಪರ್ಯಾಯ ವ್ಯವಸ್ಥೆಯನ್ನು ಮಾಡುವಂತೆ ಕೋರಿದೆ ಎನ್ನಲಾಗಿದೆ.
ಯಾವ ಯಾವ ಸ್ಥಳಗಳಲ್ಲಿ ಟ್ರಾಫಿಕ್ ಸಮಸ್ಯೆ ಆಗುತ್ತೆ ಎಂಬುದನ್ನು ಮನಗಂಡು ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿದೆ.
12.30ಕ್ಕೆ ಸಿಎಂ, ಡಿಸಿಎಂ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ‘KEA’ ಸಂಚಾರಿ ಪೊಲೀಸರ ಮೊರೆ ಹೋಗಿದೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆಗಳಿಂದ ಪಕ್ಷದ ಕಾರ್ಯಕರ್ತರು, ಜನರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ತುಮಕೂರು ರಸ್ತೆ, ಮೈಸೂರು ರಸ್ತೆ, ಬಳ್ಳಾರಿ ರಸ್ತೆ ಸೇರಿದಂತೆ ನಗರದ ಬಹುತೇಕ ಎಲ್ಲ ಭಾಗಗಳ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಸುಗಮ ಸಂಚಾರಕ್ಕೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಈ ಬಾರಿಯ ಸಿಇಟಿಗೆ 2.61 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ರಾಜ್ಯಾದ್ಯಂತ 562 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಪೈಕಿ ಬೆಂಗಳೂರಿನಲ್ಲೇ 121 ಕೇಂದ್ರಗಳಿದೆ. ಕಂಠೀರವ ಕ್ರೀಡಾಂಗಣದ ಸುತ್ತಮುತ್ತಲ ಕೆಲ ಕಾಲೇಜುಗಳನ್ನು ಪರೀಕ್ಷಾ ಕೇಂದ್ರಗಳಾಗಿ ಗುರುತಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಟ್ರಾಫಿಕ್ ಬಿಸಿ ತಗುಲುವ ಸಾಧ್ಯತೆ ಇದೆ.
ನಾಳೆಯಿಂದ ರಾಜ್ಯದ 592 ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2023 ರ ಸಿಇಟಿ ಪರೀಕ್ಷೆ ನಡೆಸಲಿದ್ದು, ಈ ಬಾರಿ 2.61 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.ಕೆಇಎ ನಡೆಸುವ 2023 ರ ಸಿಇಟಿ ಮೇ. 20 ರಿಂದ 22 ರವರೆಗೆ ನಡೆಯಲಿದ್ದು, ಈ ಬಾರಿ ಪರೀಕ್ಷೆಗೆ 2.61 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 1.40 ಲಕ್ಷ ಬಾಲಕಿಯರು ಮತ್ತು 1.21 ಲಕ್ಷ ಬಾಲಕರು ಹಾಗೂ 8 ಮಂದಿ ತೃತೀಯ ಲಿಂಗಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ https:kea.kar.nic.in ವಿದ್ಯಾರ್ಥಿಗಳು ವೆಬ್ ಸೈಟ್ ನೋಡಬಹುದು.
ವಿದ್ಯಾರ್ಥಿಗಳಿಗೆ ಸೂಚನೆ
1) ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ ಯಾವುದೇ ರೀತಿಯ ಕೈಗಡಿಯಾರವನ್ನು ಕಟ್ಟಿಕೊಂಡು ಅಥವಾ ತೆಗೆದುಕೊಂಡು ಹೋಗುವಂತಿಲ್ಲ.
2) ಕ್ಯಾಲ್ಕುಲೇಟರ್ ಅಥವಾ ಲಾಗ್ ಟೇಬಲ್ಗಳನ್ನು ಪರೀಕ್ಷಾ ಸಮಯದಲ್ಲಿ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ.
3) ಹಾಗೆಯೇ ಪರೀಕ್ಷಾ ಕೊಠಡಿ ಒಳಗೆ ಯಾವುದೇ ರೀತಿಯ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳನ್ನು(ಮೊಬೈಲ್ ಪೋನ್, ಬ್ಲೂ ಟೂತ್, ಸ್ಲೈಡ್ ರೂಲ್ಸ್, ಕ್ಯಾಲ್ಕುಲೇಟರ್, ವೈಟ್ ಪ್ಲೂಯಿಡ್, ವೈಯರ್ ಲೆಸ್ ಸೆಟ್ಸ್ ಮತ್ತಿತರ) ನಿಷೇಧಿಸಲಾಗಿದೆ.