ಆದಾಯ ತೆರಿಗೆ ಸ್ಲ್ಯಾಬ್‌ʼನಲ್ಲಿ ಯಾವುದೇ ಬದಲಾವಣೆ ಇಲ್ಲ: ನಿರ್ಮಲಾ ಸೀತಾರಾಮನ್

ನವದೆಹಲಿ: ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಪ್ರಮಾಣದಲ್ಲಿ ಶೇ.3 ರಷ್ಟು ಹೆಚ್ಚಳವಾಗಿದೆ. 2024-25ರ ಆರ್ಥಿಕ ವರ್ಷಕ್ಕೆ ತೆರಿಗೆ ಸಂಗ್ರಹ 26.02 ಟ್ರಿಲಿಯನ್ ರೂಪಾಯಿ ಇರಲಿದೆ ಎಂದು ಅಂದಾಜಿಸಲಾಗಿದೆ. ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.2024-25ನೇ ಸಾಲಿನ ಮಧ್ಯಂತರ ಬಜೆಟ್‌ ಲೋಕಸಭೆಯಲ್ಲಿ ಮಂಡನೆಯಾಗಿದ್ದು, ನೇರ ಮತ್ತು ಪರೋಕ್ಷ ತೆರಿಗೆ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ಸರ್ಕಾರ ಮುಂದಾಗಿದೆ.

ಮಧ್ಯಂತರ ಬಜೆಟ್‌ನಲ್ಲಿ (Interim Budget) ಆದಾಯ ತೆರಿಗೆ ಸ್ಲ್ಯಾಬ್​ಗಳು ಕಳೆದ ಹಣಕಾಸು ವರ್ಷದ್ದೇ ಆಗಿರುವುದರಿಂದ ತೆರಿಗೆದಾರರಿಗೆ ಯಾವುದೇ ಪರಿಹಾರ ಅಥವಾ ಆತಂಕ ಇಲ್ಲ. ಆದರೆ ಪರಿಹಾರ ನಿರೀಕ್ಷೆ ಮಾಡಿದ್ದವರಿಗೆ ಬೇಸರ ತಂದಿದೆ. ಹಾಲಿ ಸ್ಲ್ಯಾಬ್ ಪ್ರಕಾರ 7 ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇರುವುದಿಲ್ಲ.

2023-24ರ ಬಜೆಟ್‌ನಲ್ಲಿ (Union Budget 2023) ವಾರ್ಷಿಕ 7 ಲಕ್ಷ ರೂ.ವರೆಗೆ ಆದಾಯ ತೆರಿಗೆ ವಿನಾಯಿತಿಯನ್ನು ಏರಿಕೆ ಮಾಡುವ ಮೂಲಕ ಸಂಬಳದಾರರಿಗೆ ಸೀತಾರಾಮನ್‌ ಸಿಹಿ ಸುದ್ದಿ ನೀಡಿದ್ದರು. ಈ ಮೊದಲು ವಾರ್ಷಿಕ 5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಸಿಕ್ಕಿತ್ತು.

ಹಾಲಿಎಷ್ಟುಆದಾಯಕ್ಕೆಎಷ್ಟುತೆರಿಗೆಯಿದೆ?
0-3 ಲಕ್ಷ ರೂ. – ಇಲ್ಲ
3- 6 ಲಕ್ಷ ರೂ. – 5%

6- 9 ಲಕ್ಷ ರೂ. – 10%
9-12 ಲಕ್ಷ ರೂ. – 15%

12-15 ಲಕ್ಷ ರೂ. 20%

Loading

Leave a Reply

Your email address will not be published. Required fields are marked *