ಬೆಂಗಳೂರು: ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ ಎಂಬಂಥ ಪರಿಸ್ಥಿತಿ ಇದೆ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ್ ಅವರು ಟೀಕಿಸಿದರು.
ವಿಧಾನಸೌಧದ ಮೊಗಸಾಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ; ವ್ಯಕ್ತಿ ಸ್ವಾತಂತ್ರ್ಯ ಮತ್ತು ವಾಕ್ ಸ್ವಾತಂತ್ರ್ಯ ಇಲ್ಲ ಎಂಬಂತಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಇವತ್ತು ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಸರಕಾರಿ ಶಾಲೆಯ ಒಬ್ಬ ಶಿಕ್ಷಕ ರಾಜ್ಯದಲ್ಲಿ ಯಾವ್ಯಾವ ಮುಖ್ಯಮಂತ್ರಿ ಅವಧಿಯಲ್ಲಿ ಎಷ್ಟು ಸಾಲ ಮಾಡಿದ್ದಾರೆ ಎಂಬ ವಿವರವನ್ನು ತನ್ನ ಫೇಸ್‍ಬುಕ್ ಖಾತೆಯಲ್ಲಿ ಪ್ರಕಟಿಸಿದ್ದಾರೆ. ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ಮಾಡಿದ್ದ ಸಾಲ, ಜೆ.ಎಚ್.ಪಟೇಲ್, ಸಿದ್ದರಾಮಯ್ಯ, ಯಡಿಯೂರಪ್ಪ ಮತ್ತಿತರ ಸಿಎಂಗಳ ಅವಧಿಯ ಸಾಲದ ವಿವರ ನೀಡಿದ್ದಾರೆ. ಇದನ್ನು ಬಿಇಒ ಜಯಪ್ಪರ ಗಮನಕ್ಕೆ ತಂದ ಸರಕಾರವು ಶಿಕ್ಷಕ ಶಾಂತಮೂರ್ತಿಯವರನ್ನು ಅಮಾನತು ಮಾಡಿಸಿದೆ ಎಂದು ಟೀಕಿಸಿದರು.