ನಮ್ಮ ಪಕ್ಷದಿಂದ ಯಾವುದೇ ಆಪರೇಷನ್ ಮಾಡ್ತಿಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಚಾಮರಾಜನಗರ: ಯಾರಿಗೆ ಕಾಂಗ್ರೆಸ್‌ (Congress) ಪಕ್ಷದ ತತ್ವ ಸಿದ್ಧಾಂತದ ಮೇಲೆ ನಂಬಿಕೆ ವಿಶ್ವಾಸ ಇದೆಯೋ ಅಂತವರು ಪಕ್ಷಕ್ಕೆ ಬರ್ತಿದ್ದಾರೆ. ಜನಪರ ಕಾರ್ಯಕ್ರಮ ಕೊಡುತ್ತಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ನಾಯಕತ್ವದ ಮೇಲೆ ನಂಬಿಕೆ ಇಟ್ಟು ಪಕ್ಷ ಸೇರುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ತಿಳಿಸಿದ್ದಾರೆ.

ಆಪರೇಷನ್‌ ಹಸ್ತ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಪಕ್ಷದಿಂದ ಯಾವುದೇ ಆಪರೇಷನ್‌ ಮಾಡ್ತಿಲ್ಲ. ಸಿಎಂ, ಡಿಸಿಎಂ ನಾಯಕತ್ವದ ಮೇಲೆ ನಂಬಿಕೆಯಿಟ್ಟು, ಯಾವುದೇ ಷರತ್ತುಗಳಿಲ್ಲದೇ ನಮ್ಮ ಬೇರೆ-ಬೇರೆ ಪಕ್ಷದ ನಾಯಕರು ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಚಾಲನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಯೋಜನೆಗೆ ರಾಜ್ಯದಲ್ಲಿ ಈವರೆಗೆ 1.11 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಕೊನೆಯ ದಿನಾಂಕ ನಿಗದಿಪಡಿಸಿಲ್ಲ, ನಿರಂತರವಾಗಿರುತ್ತೆ. ಮುಂದೆ ಜನರು ಆಶೀರ್ವಾದ ಮಾಡಿದ್ರೆ ಈ ಯೋಜನೆ ನಿರಂತರವಾಗಿ ಜಾರಿಯಲ್ಲಿರುತ್ತೆ. ಬೇರೆ ಸರ್ಕಾರ ಬಂದರೆ ಇಂತಹ ಯೋಜನೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

ನಮ್ಮ 5 ಗ್ಯಾರಂಟಿಗಳಲ್ಲೇ ಗೃಹಲಕ್ಷ್ಮಿ ಯೋಜನೆ ಬಹಳಷ್ಟು ಸದ್ದು ಮಾಡ್ತಿದೆ. ರಾಜ್ಯದಲ್ಲಿ 13 ಸಾವಿರ ಕಡೆ ಗೃಹಲಕ್ಷ್ಮಿ ಯೋಜನೆ ಚಾಲನೆಗೊಳ್ಳುತ್ತಿದೆ. ಮಹಿಳೆಯರಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಮೈಸೂರಿನಲ್ಲಿ ನಡೆಯುವ ಬೃಹತ್‌ ಕಾರ್ಯಕ್ರಮದಲ್ಲಿ ಸುಮಾರು ಒಂದೂವರೆ ಲಕ್ಷ ಮಹಿಳೆಯರು ಭಾಗವಹಿಸಲಿದ್ದಾ ಎಂದು ತಿಳಿಸಿದ್ದಾರೆ.

 

Loading

Leave a Reply

Your email address will not be published. Required fields are marked *